ದೇವನಹಳ್ಳಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಏರ್ಪೋರ್ಟ್‌ನಿಂದ ಕರೆದೊಯ್ಯಲು ಬಂದಿದ್ದ ಅವರ ಕಾರು ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರವಿಕುಮಾರ್ ಎಸ್. ಕಾಳೆ ಮೃತರು.
ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು - Governor Thawar Chand Gehlot
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರೆದೊಯ್ಯಲು ಬಂದಿದ್ದ ಕಾರು ಚಾಲಕ ನಿನ್ನೆ ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟರು.
![ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು ರಾಜಭವನ](https://etvbharatimages.akamaized.net/etvbharat/prod-images/768-512-17174052-thumbnail-3x2-bin.jpg)
ರಾಜಭವನ
ಹುಬ್ಬಳ್ಳಿಯಿಂದ ತಡರಾತ್ರಿ ವಿಮಾನ ನಿಲ್ದಾಣಕ್ಕೆ ರಾಜ್ಯಪಾಲರು ಆಗಮಿಸಿದ್ದರು. ಅವರನ್ನು ಕರೆದೊಯ್ಯಲು ರವಿಕುಮಾರ್ ಬಂದಿದ್ದರು. ರಾಜ್ಯಪಾಲರು ಏರ್ಪೋರ್ಟ್ಗೆ ಬಂದು ವಿಐಪಿ ಲಾಂಜ್ನಲ್ಲಿರುವಾಗ ಕಾರು ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ಹೃದಯಾಘಾತವಾಗಿ ಕಾರಲ್ಲಿಯೇ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಭಾರತವನ್ನು ವಿಶ್ವ ಗುರುವನ್ನಾಗಿ ಮಾಡಬೇಕು: ರಾಜ್ಯಪಾಲ ಗೆಹ್ಲೋಟ್