ಬೆಂಗಳೂರು: ಕಳೆದ ಆರು ತಿಂಗಳಿನಿಂದ ನೆನಗುದಿಗೆ ಬಿದ್ದಿದ್ದ ಜಿಲ್ಲಾ ಉಸ್ತುವಾರಿಗಳ ನೇಮಕ ಪ್ರಕ್ರಿಯೆ ಇಂದು ಪೂರ್ಣಗೊಂಡಿದೆ. ನಿರೀಕ್ಷೆಯಂತೆ ಬೆಂಗಳೂರು ನಗರದ ಉಸ್ತುವಾರಿಯನ್ನು ಮುಖ್ಯಮಂತ್ರಿಗಳೇ ಇಟ್ಟುಕೊಂಡಿದ್ದಾರೆ. ಉಳಿದ ಜಿಲ್ಲೆಗಳನ್ನು ಸಚಿವರಿಗೆ ಹಂಚಿಕೆ ಮಾಡಲಾಗಿದೆ.
ಬಹುತೇಕ ಸಚಿವರಿಗೆ ತಮ್ಮ ಸ್ವಂತ ಜಿಲ್ಲೆಗಳು ಸಿಕ್ಕಿಲ್ಲ. ಈ ಹಿಂದೆ ಕೋವಿಡ್ ಉಸ್ತುವಾರಿ ವಹಿಸಿಕೊಂಡಿದ್ದ ಜಿಲ್ಲೆಗಳೂ ಸಹ ಸಚಿವರಿಗೆ ಅದಲು-ಬದಲಾಗಿವೆ. ಜನವರಿ 26ಕ್ಕೆ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಬೇಕಿದೆ.
ಹಾಗಾಗಿ, ಪೂರ್ಣ ಪ್ರಮಾಣದ ಜಿಲ್ಲಾ ಉಸ್ತುವಾರಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರ ಜೊತೆಗೆ ಆಯಾ ಜಿಲ್ಲಾ ಸಚಿವರಿಗೆ ಕೋವಿಡ್ ಉಸ್ತುವಾರಿಯನ್ನೂ ಸಹ ವಹಿಸಲಾಗಿದೆ. ಕೆಲ ಸಚಿವರಿಗೆ ಎರಡು ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.