ಬೆಂಗಳೂರು: ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್ ಆರಂಭಿಸಲಿದೆ. ಅದಕ್ಕೂ ಮುನ್ನ 'ನಮ್ಮ ಕ್ಲಿನಿಕ್'ಗೆ ಸೃಜನಾತ್ಮಕ ಮತ್ತು ನವೀನ ಲೋಗೋ ವಿನ್ಯಾಸ ಮಾಡಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ನಮ್ಮ ಕ್ಲಿನಿಕ್‌ನ ವಿಭಿನ್ನ ಮತ್ತು ಆಕರ್ಷಕ ಗುರುತು ಹೇಗಿರಬೇಕು ಎನ್ನುವುದನ್ನು ನೀವೇ ನಿರ್ಧರಿಸಬಹುದು.
ಸರ್ಕಾರದ ಮತ್ತು ಆರೋಗ್ಯ ಇಲಾಖೆಯ ಉದ್ದೇಶವನ್ನು ಬಿಂಬಿಸುವಂತೆ ಆಕರ್ಷಕ ಲೋಗೋ ವಿನ್ಯಾಸ ಮಾಡಿ 'logo4nammaclinic@gmail.com ' ಗೆ ಕಳುಹಿಸಬೇಕು. ಆಯ್ಕೆಯಾದ ವಿನ್ಯಾಸವನ್ನು ಡಿಸೈನ್ ಮಾಡಿದವರಿಗೆ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಂದ ವಿಶೇಷ ವೈಯಕ್ತಿಕ ಗೌರವ ಸಿಗಲಿವೆ. ಆಗಸ್ಟ್ 5 ರಿಂದ ಆಗಸ್ಟ್ 15ರ ಒಳಗೆ ಲೊಗೋ ವಿನ್ಯಾಸ ಕಳುಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.