ಯುವರತ್ನನ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ: ಶೇ.100ರಷ್ಟು ಆಸನ ಭರ್ತಿಗೆ ಅವಕಾಶ - ಕೊರೊನಾ ಗೈಡ್ಲೈನ್ಸ್
20:45 April 03
ಏಪ್ರಿಲ್ 7ರವರೆಗೆ ಶೇ.100ರಷ್ಟು ಆಸನ ಭರ್ತಿಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಸ್ಯಾಂಡಲ್ವುಡ್ಗೆ ನಿನ್ನೆಯಷ್ಟೇ ಶಾಕ್ ನೀಡಿದ್ದ ರಾಜ್ಯ ಸರ್ಕಾರ ಇಂದು ಸಿಹಿ ಸುದ್ದಿ ನೀಡಿದೆ. ಚಿತ್ರಮಂದಿರಗಳಲ್ಲಿ ಏ.7ರವರೆಗೆ ಶೇ.100ರಷ್ಟು ಆಸನ ಭರ್ತಿಗೆ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಸಿನಿಮಾ ಮಂದಿರಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಶೇ. 50 ರಷ್ಟು ಆಸನ ಭರ್ತಿಗೆ ಮಾತ್ರ ಅವಕಾಶ ಕಲ್ಪಿಸಿ ಸರ್ಕಾರ ನಿನ್ನೆಯಷ್ಟೇ ಆದೇಶ ಹೊರಡಿಸಿತ್ತು. ಇದು ಚಿತ್ರರಂಗ ಸೇರಿದಂತೆ ಗುರುವಾರವಷ್ಟೇ ಬಿಡುಗಡೆಯಾದ ಪುನೀತ್ ರಾಜ್ಕುಮಾರ್ ನಾಯಕತ್ವದ ಯುವರತ್ನ ಚಿತ್ರತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿತ್ತು.
ಅಂತೆಯೇ, ರಾಜ್ಯಾದ್ಯಂತ ಸಿನಿಮಾ ಅಭಿಮಾನಿಗಳು, ನಟರು ಹಾಗೂ ಯುವರತ್ನ ಚಿತ್ರ ತಂಡವು ಥಿಯೇಟರ್ಗಳಲ್ಲಿ ಶೇ.100ರಷ್ಟು ಅವಕಾಶ ನೀಡುವಂತೆ ಸಿಎಂಗೆ ಮನವಿ ಮಾಡಿದ್ದರು. ಪುನೀತ್ ರಾಜ್ಕುಮಾರ್ ಮತ್ತು ತಂಡ ಸಿಎಂ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದೆ. (ಇದನ್ನೂ ಓದಿ: ಥಿಯೇಟರ್ಗಳಲ್ಲಿ ಶೇ.50ರಷ್ಟು ಸೀಟು ಭರ್ತಿ ಆದೇಶ: ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ ಪುನೀತ್)