ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 607 ಜ್ಯೂನಿಯರ್ ಅಸಿಸ್ಟಂಟ್, ಎಸ್ಡಿಎ ಮತ್ತು ಅಸಿಸ್ಟೆಂಟ್ ಹುದ್ದೆ ಭರ್ತಿಗೆ ಕೆಇಎ ಹೊಸ ಅಧಿಸೂಚನೆ ಪ್ರಕಟಿಸಿದೆ.
ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಲವು ಸ್ತರದ ಹುದ್ದೆಗಳ ಭರ್ತಿಗೆ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಯಮ ನಿಯಮಿತ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ನಲ್ಲಿ ಖಾಲಿ ಇರುವ ಒಟ್ಟು 607 ಹುದ್ದೆಗಳ ಭರ್ತಿ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
ಹುದ್ದೆ ವಿವರ:
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
- ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ) ಗ್ರೂಪ್-ಬಿ) : 4
- ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ)- ಗ್ರೂಪ್ ಬಿ: 2
- ಆಪ್ತ ಕಾರ್ಯದರ್ಶಿ- ಗ್ರೂಪ್ ಸಿ : 1
- ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್ ಸಿ : 3
- ಸಹಾಯಕರು (ತಾಂತ್ರಿಕ) ಗ್ರೂಪ್ ಸಿ : 6
- ಸಹಾಯಕರು (ತಾಂತ್ರಿಕೇತರ) ಗ್ರೂಪ್ ಸಿ : 6
- ಒಟ್ಟು ಹುದ್ದೆ: 26
ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ
- ಸಹಾಯಕ ವ್ಯವಸ್ಥಾಪಕರು : 10
- ಗುಣಮಟ್ಟ ನಿರೀಕ್ಷಕರು : 23
- ಹಿರಿಯ ಸಹಾಯಕರು (ಲೆಕ್ಕ): 33
- ಹಿರಿಯ ಸಹಾಯಕರು: 57
- ಕಿರಿಯ ಸಹಾಯಕರು: 263
- ಒಟ್ಟು ಹುದ್ದೆಗಳು : 386
ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
- ಕಲ್ಯಾಣ ಅಧಿಕಾರಿ (ಗ್ರೂಪ್ ಸಿ) : 12
- ಕ್ಷೇತ್ರ ನಿರೀಕ್ಷಕರು (ಗ್ರೂಪ್ ಸಿ) : 60
- ಪ್ರಥಮ ದರ್ಜೆ ಸಹಾಯಕರು (ಗ್ರೂಪ್ ಸಿ) : 12
- ಆಪ್ತ ಸಹಾಯಕರು (ಗ್ರೂಪ್ ಸಿ) : 02
- ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್ ಸಿ) : 100.
- ಒಟ್ಟು : 186