ಕರ್ನಾಟಕ

karnataka

ETV Bharat / state

2020ಕ್ಕೆ ರಾಜ್ಯದಲ್ಲಿ ಗ್ರಾಪಂ ಚುನಾವಣೆ: ಪೂರ್ವಸಿದ್ಧತೆಯಲ್ಲಿ ಚುನಾವಣಾ ಆಯೋಗ - ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ

ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ರಾಜ್ಯ ಚುನಾವಣಾ ಆಯೋಗ ತೀರ್ಮಾನ ಕೈಗೊಂಡಿದ್ದು, ಪೂರ್ವಸಿದ್ಧತೆ ಆರಂಭಿಸುವಂತೆ ಜಿಲ್ಲಾಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಿದೆ.

ಪೂರ್ವಸಿದ್ಧತೆಯಲ್ಲಿ ಚುನಾವಣಾ ಆಯೋಗ

By

Published : Jul 27, 2019, 8:38 PM IST

ಬೆಂಗಳೂರು: 2020ರ ಮೇ ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ತೀರ್ಮಾನ ಮಾಡಿದ್ದು, ಪೂರ್ವ ಸಿದ್ಧತೆ ಆರಂಭಿಸಿದೆ.

ಚುನಾವಣಾ ಆಯೋಗದ ಅಧಿಸೂಚನೆ

ಗ್ರಾಮ ಪಂಚಾಯಿತಿಗಳಿಗೆ 2020ರ ಮೇ ತಿಂಗಳಲ್ಲಿ ಚುನಾವಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಅಧಿಸೂಚನೆ ಹೊರಡಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯು ಬದಲಾವಣೆ ಆಗಿದ್ದಲ್ಲಿ ಜನಸಂಖ್ಯೆ ವ್ಯತ್ಯಾಸದಿಂದ ಹೊಸದಾಗಿ ಸ್ಥಾನಗಳನ್ನು ನಿಗದಿಪಡಿಸಿ, ಚುನಾವಣೆ ನಡೆಸಲು ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಅಲ್ಲದೆ ವರ್ಗವಾರು ಸ್ಥಾನಗಳನ್ನು ಪುನರ್ ನಿಗದಿಪಡಿಸಬೇಕಾದ ಗ್ರಾಮ ಪಂಚಾಯಿತಿಗಳ ವಿವರಗಳನ್ನು ನಿಗದಿತ ದಿನಾಂಕದಂದು ಆಯೋಗಕ್ಕೆ ಕಳುಹಿಸಿಕೊಡುವಂತೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 2015 ರ ಮೇ-ಜೂನ್ ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿತ್ತು.

ABOUT THE AUTHOR

...view details