ಬೆಂಗಳೂರು :ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದದ ಬಗ್ಗೆ ಕರ್ನಾಟಕ ಹೈಕೋರ್ಟ್ನ ಮಹತ್ವದ ತೀರ್ಪು ಹೊರಬಿದ್ದಿದೆ. ತರಗತಿಗಳಲ್ಲಿ ಹಿಜಾಬ್ ಧರಿಸುವ ಪರವಾಗಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶವನ್ನು ಉಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.
ಅಲ್ಲದೇ, ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಅಗತ್ಯತೆಯೂ ಅಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ಮೂಲಕ ರಾಜ್ಯದಲ್ಲಿ ಎದ್ದಿದ್ದ ಹಿಜಾಬ್ ವಿವಾದಕ್ಕೆ ನ್ಯಾಯಾಲಯ ತೆರೆ ಎಳೆದಿದೆ.
ಕಳೆದ ಜನವರಿ ತಿಂಗಳಿಂದಲೂ ಹಿಜಾಬ್ ಪರ ಮತ್ತು ವಿರೋಧ ಚರ್ಚೆಗಳು ನಡೆಯುತ್ತಿದ್ದವು. ಹಿಜಾಬ್ ಧರಿಸುವುದಕ್ಕೆ ಪ್ರತಿಯಾಗಿ ಕೇಸರಿ ಶಾಲು ಧರಿಸಿಕೊಂಡು ಬರುವ ಮೂಲಕ ವಿವಾದ ಮತ್ತಷ್ಟು ಕಾವು ಪಡೆದಿತ್ತು. ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜಿನಿಂದ ಆರಂಭವಾಗಿದ್ದ ಹಿಜಾಬ್ ವಿವಾದ ದೇಶಾದ್ಯಂತ ವ್ಯಾಪಿಸಿತ್ತು.