ಬೆಂಗಳೂರು:ರಾಜ್ಯದ ಕೆಲ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ವಸ್ತ್ರಸಂಹಿತೆ ನಿಗದಿಪಡಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ.
ಈ ಕುರಿತಂತೆ ಸಲ್ಲಿಸಿರುವ 8 ರಿಟ್ ಅರ್ಜಿಗಳು ಹಾಗೂ 20ಕ್ಕೂ ಹೆಚ್ಚು ಮಧ್ಯಂತರ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಖಾಜಿ ಜೈಬುನ್ನೀಸಾ ಅವರಿರುವ ತ್ರಿಸದಸ್ಯ ಪೀಠ ವಿಚಾರಣೆ ನಡೆಸುತ್ತಿದೆ.
ಹಿಜಾಬ್ ನಿರ್ಬಂಧಿಸಿರುವ ಶಿಕ್ಷಣ ಸಂಸ್ಥೆಗಳ ಕ್ರಮ ಸಂವಿಧಾನಬಾಹಿರ. ಶಿಕ್ಷಣ ಸಂಸ್ಥೆಗಳಲ್ಲಿನ ಕಾಲೇಜು ಅಭಿವೃದ್ಧಿ ಸಮಿತಿಗಳಿಗೆ ಸಮವಸ್ತ್ರ ಸಂಹಿತೆ ನಿಗದಿಪಡಿಸುವ ಅಧಿಕಾರವಿಲ್ಲ. ಹಿಜಾಬ್ ಧರಿಸುವುದು ಕಡ್ಡಾಯ ಧಾರ್ಮಿಕ ಆಚರಣೆ.