ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಚಾಲಕರ ಹುದ್ದೆ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು, ಚಾಲನೆಯಲ್ಲಿ ನಿಪುಣತೆ ಜೊತೆಗೆ ದಾಖಲಾತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಒಟ್ಟು 39 ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದ್ದು, ಇವುಗಳಲ್ಲಿ 2 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಗಳ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಈ ಹುದ್ದೆಗಳ ನೇಮಕಾತಿ, ಅರ್ಜಿ ಸಲ್ಲಿಕೆ, ವಿದ್ಯಾರ್ಹತೆ ಸೇರಿದಂತೆ ಇನ್ನಿತರ ಮಾಹಿತಿಗಳು ಇಲ್ಲಿವೆ.
ಹುದ್ದೆಯ ವಿವರ: ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಚಾಲಕರಾಗಿ ಕಾರ್ಯ ನಿರ್ವಹಿಸಲು ಅಭ್ಯರ್ಥಿಗಳಿಗೆ ಅರ್ಜಿ ಕರೆಯಲಾಗಿದೆ. ಈ ಹುದ್ದೆಗೆ ಆಯ್ಕೆಗೊಂಡ ಅಭ್ಯರ್ಥಿಗಳು ಧಾರವಾಡ/ ಕಲಬುರ್ಗಿ ಪೀಠದಲ್ಲಿ ಹಾಗೂ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲಿದ್ದಾರೆ.
ವಿದ್ಯಾರ್ಹತೆ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ಎಸ್ಎಸ್ಎಲ್ಸಿ ಮುಗಿಸಿರಬೇಕು.
ಅನುಭವ: ಅಭ್ಯರ್ಥಿಗಳು ಚಾಲನ ಪರವಾನಗಿ ಹೊಂದಿರುವುದು ಕಡ್ಡಾಯ. ಲಘು ಮತ್ತು ಭಾರಿ ಗಾತ್ರದ ವಾಹನ ಚಾಲನೆ ಮಾಡಿದ ಐದು ವರ್ಷದ ಅನುಭವ ಹೊಂದಿರಬೇಕಾಗಿದೆ. ಕನ್ನಡ ಮತ್ತು ಇಂಗ್ಲಿಷಿನ ಸಾಮಾನ್ಯ ಜ್ಞಾನ ಹೊಂದಿರಬೇಕು.
ವೇತನ: ಈ ಹುದ್ದೆಗೆ ಮಾಸಿಕ 25,500 ರಿಂದ 81,100 ರೂವರೆಗೆ ನಿಗದಿ ಮಾಡಲಾಗಿದೆ.
ವಯೋಮಿತಿ:ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಟ 35 ವರ್ಷ ವಯಸ್ಸು ಮೀರಿರಬಾರದು. ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ 2ಎ, 2ಬಿ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.