ಬೆಂಗಳೂರು :ಕಬ್ಬನ್ ಪಾರ್ಕ್ ಆವರಣದಲ್ಲಿ ಯಾವುದೇ ಹೊಸ ಕಟ್ಟಡ ನಿರ್ಮಿಸುತ್ತಿಲ್ಲ, ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡದಲ್ಲಿ ಕೇವಲ ನವೀಕರಣ ಕಾಮಗಾರಿ ನಡೆಸಲಾಗುತ್ತಿದೆ ಹೊರತು ಯಾವುದೇ ಹೊಸ ನಿರ್ಮಾಣ ಕೈಗೊಂಡಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದೆ.
ಕಬ್ಬನ್ ಪಾರ್ಕ್ ಆವರಣದಲ್ಲಿ ಅನಧಿಕೃತ ಕಟ್ಟಡಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ಎಸ್.ಉಮೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಇದನ್ನೂ ಓದಿ:ಸಿಮ್ಲಿಪಾಲ್ ಸೇರಿ 395 ಅರಣ್ಯ ಪ್ರದೇಶಗಳಲ್ಲಿ ಕಾಳ್ಗಿಚ್ಚಿನ ಹಾವಳಿ
ಈ ವೇಳೆ ಸರ್ಕಾರಿ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಸಂಘಕ್ಕೆ ಸೇರಿದ ಕಟ್ಟಡದಲ್ಲಿನ ಕೊಠಡಿ, ಕಾರಿಡಾರ್, ಎನ್‌ಜಿಓ ಹಾಲ್ ಮತ್ತು ಛಾವಣಿ ಭಾಗಗಳನ್ನು ಲೋಕೋಪಯೋಗಿ ಇಲಾಖೆ ಮೂಲಕ ನವೀಕರಿಸಲಾಗುತ್ತಿದೆ. ಅದು ಹೊರತುಪಡಿಸಿ ಯಾವುದೇ ಹೊಸ ನಿರ್ಮಾಣ ಕಾಮಗಾರಿ ಕೈಗೊಂಡಿಲ್ಲ. ಅಲ್ಲದೆ, ಹೈಕೋರ್ಟ್ ಅನುಮತಿ ಪಡೆಯದೆ ಯಾವುದೇ ಹೊಸ ನಿರ್ಮಾಣ ಕಾಮಗಾರಿ ನಡೆಸುವುದಿಲ್ಲ ಎಂದು ತಿಳಿಸಿದರು.