ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಮತ್ತೆ 14 ದಿನಗಳ ಲಾಕ್​ಡೌನ್​ ವಿಸ್ತರಣೆ ಮಾಡಿ ಮಹತ್ವದ ಆದೇಶ - ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್​

ರಾಜ್ಯದ ಜನರ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು ಇದಕ್ಕೆ ಜನತೆ ಸಹಕಾರ ನೀಡಬೇಕು. ಕೊರೊನಾ ಹಳ್ಳಿಹಳ್ಳಿಗೆ ವಿಸ್ತರಣೆಯಾಗುತ್ತದೆ. ಸಾವಿನ ಸಂಖ್ಯೆ ಜಾಸ್ತಿಯಾಗುತ್ತಿದ್ದು, ಇದರ ನಿಯಂತ್ರಣಕ್ಕೆ ಕೆಲವು ನಿರ್ಧಾರ ಮಾಡಿದ್ದೇವೆ ಎಂದರು.

BSY
BSY

By

Published : May 21, 2021, 7:10 PM IST

Updated : May 21, 2021, 7:45 PM IST

ಬೆಂಗಳೂರು: ರಾಜ್ಯದಲ್ಲಿ ಕೋವಿಡ್​ ನಿಯಂತ್ರಣಕ್ಕಾಗಿ ಮತ್ತೆ 14 ದಿನಗಳ ಕಾಲ ಲಾಕ್​ಡೌನ್​ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಬಿಎಸ್​ವೈ ಮಹತ್ವದ ಆದೇಶ ಹೊರಡಿಸಿದ್ದಾರೆ.

ಸಚಿವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್​ವೈ, ಜೂನ್​​ 7ರ ಬೆಳಗ್ಗೆ 6 ಗಂಟೆಯವರೆಗೆ ಲಾಕ್​ಡೌನ್​ ವಿಸ್ತರಣೆಯಾಗಲಿದೆ ಎಂದರು. ಹೀಗಾಗಿ ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಮುಂದಿನ 14 ದಿನಗಳ ಕಾಲ ಈಗಾಗಲೇ ಜಾರಿಗೊಂಡಿರುವ ಲಾಕ್​ಡೌನ್​ ಮುಂದುವರೆಯಲಿದೆ.

ಲಾಕ್​ಡೌನ್​ ವಿಸ್ತರಣೆ ಮಾಡಿ ಸಿಎಂ ಘೋಷಣೆ

ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಲಾಕ್​ಡೌನ್​ ಮಾರ್ಗಸೂಚಿ ನಿಯಮ ಪಾಲನೆ ಕಡ್ಡಾಯವಾಗಿದ್ದು, ಬೆಳಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ.

ಅನಗತ್ಯವಾಗಿ ಓಡಾಡುವುದು ಕಂಡು ಬರುತ್ತಿರುವ ಕಾರಣ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಸ್​ವೈ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ ಎಂದರು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಜ್ಞರ ಸಲಹೆ ಮೇರೆಗೆ ಈ ಕಠಿಣ ನಿರ್ಬಂಧ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸಿಎಂ ಮನವಿ ಮಾಡಿದರು.

ಜನರು ಕೊರೊನಾ ನಿಯಮಗಳನ್ನು ಪಾಲಿಸಬೇಕು. ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ವೈಯಕ್ತಿಕ ಸ್ವಚ್ಛತೆ ಪಾಲನೆ ಮಾಡಬೇಕು. ಇನ್ನಷ್ಟು ಹೆಚ್ಚು ಜಾಗೃತರಾಗಿರಬೇಕು ಎಂದು ಸಲಹೆ ನೀಡಿದರು.

ಬ್ಲಾಕ್ ಫಂಗಸ್​ಗೆ ಉಚಿತ ಚಿಕಿತ್ಸೆ

ರಾಜ್ಯದಲ್ಲಿ ಬ್ಲಾಕ್ ಫಂಗಸ್ ಹರಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಇದಕ್ಕೆ ಉಚಿತವಾಗಿ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ. ಸರ್ಕಾರವೇ ಇದರ ವೆಚ್ಚ ಭರಿಸಲಿದೆ. ಇದರಿಂದ ಸಾಮಾನ್ಯ ಜನರಿಗೆ ಅನುಕೂಲವಾಗಲಿದೆ. ದೊಡ್ಡ ಪ್ರಮಾಣದ ಹಣ ಭರಿಸಲು ಶಕ್ತಿ ಇಲ್ಲದವರಿಗೆ ಇದರಿಂದ ಸಹಕಾರವಾಗಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ

ಸದ್ಯ ಈಗಾಗಲೇ ರಾಜ್ಯದಲ್ಲಿ ಇರುವ ಮಾರ್ಗಸೂಚಿಯೇ ಮುಂದುವರೆಯಲಿದೆ.ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಬೆಳಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.ಇನ್ಮುಂದೆ ಇನ್ನಷ್ಟು ಕಟ್ಟುನಿಟ್ಟಿನ ನಿಯಮವನ್ನು ಕೈಗೊಳ್ಳಲಾಗುತ್ತದೆ. ಖರೀದಿ ಸಮಯ ಮುಗಿದರೂ ಅನಗತ್ಯವಾಗಿ ಜನರು ಓಡಾಡುವುದು ನಡೆಯುತ್ತಿದೆ. ಇಂತಹವರ ವಿರುದ್ಧ ಕ್ರಮಕ್ಕೆ ಪೊಲೀಸ್ ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಅನಿವಾರ್ಯ ಕ್ರಮ ಕೈಗೊಳ್ಳಲು ಅವಕಾಶ ನೀಡದೇ ಸಹಕಾರ ನೀಡಿ ಎಂದು ಸಿಎಂ ಮನವಿ ಮಾಡಿದರು.

Last Updated : May 21, 2021, 7:45 PM IST

ABOUT THE AUTHOR

...view details