ಬೆಂಗಳೂರು: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟಿಸಲಾಗಿದೆ. 2023-24ನೇ ಸಾಲಿನ ರಾಜ್ಯ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರ ಮತ್ತು ಮುಖ್ಯ ಶಿಕ್ಷಕರು ತತ್ಸಮಾನ ವೃಂದದ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಸಿಆರ್ಪಿ, ಬಿಆರ್ಪಿ, ಶಿಕ್ಷಣ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕರ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಲ್ಲಿ ಆಹ್ವಾನಿಸಿರುವ ಹುದ್ದೆ ಮಾಹಿತಿ ಇಲ್ಲಿದೆ.
- ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು (ಸಿಆರ್ಪಿ)
- ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು
- ತಾಂತ್ರಿಕ ಸಹಾಯಕರು
- ಶಿಕ್ಷಣ ಸಂಯೋಜನಕರು
- ಶಿಕ್ಷಣ ಸಂಯೋಜಕರು
- ಕ್ಷೇತ್ರ ಸಂಪನ್ಮೂಲ ವ್ಯಕ್ತಿ
- ಶಿಕ್ಷಣ ಸಂಯೋಜಕರು
- ತಾಂತ್ರಿಕ ಸಹಾಯಕರು
- ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ
- ಸಹಾಯಕ ಯೋಜನಾ ಸಮನ್ವಯಾಧಿಕಾರಿ
- ವಿಷಯ ಪರಿವೀಕ್ಷಕರು ಮತ್ತು ವಿಭಾಗೀಯ ಸಹ ನಿರ್ದೇಶಕರು
ಸಹಾಯಕ, ನಿರ್ದೇಶಕ
ವಿದ್ಯಾರ್ಹತೆ: ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ಅನುಸಾರ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕರ್ನಾಟಕ ಪ್ರೌಢಶಾಲಾ ಸಹಶಿಕ್ಷಕ/ ಟಿಜಿಟಿ ವೃಂದದಲ್ಲಿ ಅಥವಾ ಸಹ ಶಿಕ್ಷಕರಾಗಿ 10 ವರ್ಷಗಳ ಕಾಲ ಸೇವಾ ಅನುಭವ ಹೊಂದಿರಬೇಕು. ಅಭ್ಯರ್ಥಿಗಳು ಪ್ರಸ್ತುತ ಹುದ್ದೆ ಮತ್ತು ಸ್ಥಳದಲ್ಲಿ ಕನಿಷ್ಠ 3 ವರ್ಷಗಳ ಸೇವೆಯನ್ನು ಪೂರೈಸಿರಬೇಕು. ಪ್ರಸ್ತುತ ತಾಂತ್ರಿಕ ಸಹಾಯಕರ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವವರು ಕೂಡ ಲಿಖಿತ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 55 ವರ್ಷ ಮೀರಿರಬಾರದು.