ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇಂದಿನಿಂದ 4 ದಿನ ಇನ್ನಷ್ಟು ಚುರುಕಾಗಲಿದೆ. ಹೀಗಾಗಿ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಚಿಕ್ಕಮಗಳೂರು, ಚಾಮರಾಜನಗರ, ಕೋಲಾರದಲ್ಲಿ ಇಂದಿನಿಂದ 4 ದಿನ ಹಾಗೂ ಕೊಡಗು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಆಗಸ್ಟ್ 31ರವರೆಗೆ ಜೋರು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಧಾರವಾಡ, ಬಳ್ಳಾರಿ, ಗದಗ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ ಜಿಲ್ಲೆಗಳಿಗೆ ಆಗಸ್ಟ್ 30 ಮತ್ತು 31ರಂದು ಯೆಲ್ಲೋ ಅಲರ್ಟ್ ಇರಲಿದೆ.
ಶನಿವಾರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಡಿ ಮಳೆ ಆಗಿದೆ. ಪ್ರಮಖವಾಗಿ ಮಾನ್ವಿ 19 ಸೆಂ.ಮೀ, ಮದ್ದೂರು 10, ಶಿರಾ 9, ರಾಮನಗರ 9, ರಾಯಚೂರು, ಬಳ್ಳಾರಿಯ ಕೊಟ್ಟೂರು, ಶ್ರೀರಂಗಪಟ್ಟಣ ಮತ್ತು ಬೆಂಗಳೂರು ನಗರದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಮಳೆ ಅಬ್ಬರ: ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ