ಕರ್ನಾಟಕ

karnataka

ETV Bharat / state

ರಾಜ್ಯದ ವಿವಿಧೆಡೆ ನಾಲ್ಕು ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ - etv bharat kannada

ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ಭಾರಿ ಪ್ರಮಾಣದ ಮಳೆ ಬೀಳಲಿದೆ. ಉತ್ತರ ಒಳನಾಡಿನ ಬಾಗಲಕೋಟೆ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.

karnataka-rain-update-yellow-alert-in-many-districts
ರಾಜ್ಯದ ವಿವಿಧೆಡೆ ನಾಲ್ಕು ದಿನ ಭಾರಿ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ

By

Published : Oct 8, 2022, 3:22 PM IST

ಬೆಂಗಳೂರು:ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನ ಭಾರಿ ಮಳೆ ಆಗಲಿದೆ. ಹವಾಮಾನ ವೈಪರೀತ್ಯದಿಂದ ಮಳೆ ಆಗುತ್ತಿದೆ. ಮಳೆ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಲಾಖೆಯ ಮಾಹಿತಿಯಂತೆ, ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಬಿಟ್ಟು ದಿನ ಭಾರಿ ಪ್ರಮಾಣದ ಮಳೆ ಬೀಳಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ಕೊಪ್ಪಳ, ವಿಜಯಪುರ ಮತ್ತು ಯಾದಗಿರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅದೇ ರೀತಿ ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 10 ಮತ್ತು 11ರಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣೆಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಉತ್ತಮ ಮಳೆ ಆಗಲಿದೆ.

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲವಾಗಿದ್ದು, ಮುಂಬರುವ ದಿನಗಳಲ್ಲಿ ಮಳೆ ಪ್ರಮಾಣ ಇಳಿಮುಖವಾಗುವ ಸಾಧ್ಯತೆ ಹೆಚ್ಚಿದೆ. ಸದ್ಯ ಅಕ್ಟೋಬರ್ 8ರಿಂದ 11ರ ನಡುವೆ ಈ ಮೇಲಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ಬಯಲುಸೀಮೆ ಭಾಗದ ಹಾಗೂ ಹಳೆ ಮೈಸೂರಿನ ಕೆಲ ಭಾಗಗಳಲ್ಲಿ ಮೋಡಕವಿದ ವಾತಾವರಣವಿದೆ. ಸಂಜೆ ಇಲ್ಲ ರಾತ್ರಿ ಹೊತ್ತಲ್ಲಿ ಮಳೆ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:ಒಳಚರಂಡಿ ನೀರನ್ನು ಮಳೆ ನೀರು ಕಾಲುವೆಗೆ ಹರಿಸಿದ್ದಕ್ಕೆ ಸಮಗ್ರ ತನಿಖೆಗೆ ಆದೇಶಿಸಿದ ಹೈಕೋರ್ಟ್​

ABOUT THE AUTHOR

...view details