ಬೆಂಗಳೂರು:ರಾಜ್ಯದಲ್ಲಿ ಕೆಲವು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆ ಆರ್ಭಟ ಮತ್ತೆ ಶುರುವಾಗಿದೆ. ರಾಜ್ಯದ ಹಲವೆಡೆ ಇಂದಿನಿಂದ ಮತ್ತೆ ಮಳೆಯಾಗುತ್ತಿದೆ. ಹೀಗಾಗಿ ಹಲವು ಜಿಲ್ಲೆಗಳಿಗೆ ಮುಂದಿನ ಮೂರೂ ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 23ರಿಂದ ಮತ್ತೆ ಮೂರು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.