ಬೆಂಗಳೂರು: ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಖಂಡಿಸಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಿಂದ ರಾಜಭವನದ ವರೆಗೆ ಬೃಹತ್ ಪ್ರತಿಭಟನೆ ಮಾಡಲು ಕರ್ನಾಟಕ ರಕ್ಷಣಾ ವೇಧಿಕೆ ನಿರ್ಧರಿಸಿದೆ.
ರಾಜ್ಮಾಯ ಕಾಂಗ್ರೇಶ್ ಮುಖಂಡ ಡಿಕೆ ಶಿವಕುಮಾರ್ರನ್ನು ಬಂಧಿಸುವ ಮೂಲಕ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರವೇ ಮುಂದಾಗಿದೆ. ಇದಕ್ಕೆ ಮಾಜಿ ಪ್ರಧಾನ ಮಂತ್ರಿಗಳು ಮತ್ತು ಒಕ್ಕಲಿಗ ಸಮಾಜದ ಹಿರಿಯ ನಾಯಕರಾದ ಹೆಚ್. ಡಿ.ದೇವೇಗೌಡರನ್ನು ಮತ್ತು ಮಾಜಿ ಮುಖ್ಯಮಂತ್ರಿಗಳು ಮತ್ತು ಒಕ್ಕಲಿಗ ಸಮಾಜದ ಹಿರಿಯರಾದ ಶ್ರೀ ಹೆಚ್. ಡಿ.ಕುಮಾರಸ್ವಾಮಿ ರವರನ್ನು ಮತ್ತು ಜೆಡಿಎಸ್ ಪಕ್ಷದ ಶಾಸಕರುಗಳು ಮತ್ತು ಪಕ್ಷದ ಎಲ್ಲಾ ಮುಖಂಡರುಗಳು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಕರವೇ ರಾಜ್ಯಾಧ್ಯಕ್ಷ ಮನವಿ ಮಾಡಿದ್ದಾರೆ.
ಡಿಕೆಶಿ ಬಂಧನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಗಾಗಿ HDD ಭೇಟಿ ಮಾಡಿದ ಕರವೇ ಅಧ್ಯಕ್ಷ!
ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ತಮ್ಮ ಹೋರಾಟಕ್ಕೆ ಬೆಂಬಲ ನೀಡುವಂತೆ ಕೋರಿದ್ದಾರೆ.
karave
ಭಾನುವಾರ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿ ಪ್ರತಿಭಟನೆಗೆ ಬೆಂಬಲ ಕೋರಿದ್ದಾರೆ ಎಂದು ತಿಳಿದುಬಂದಿದೆ.