ಕರ್ನಾಟಕ

karnataka

ETV Bharat / state

ಹಿಂದಿ ದಿವಸ್ ಆಚರಣೆಗೆ ವಿರೋಧ: ಫ್ರೀಡಂ ಪಾರ್ಕ್ ನಲ್ಲಿ ಕರವೇ ಪ್ರತಿಭಟನೆ - ಈಟಿವಿ ಭಾರತ ಕನ್ನಡ

ಹಿಂದಿ ದಿವಸ್ ಆಚರಣೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸಿದರು.

karnataka-rakshana-vedike-protest-against-hindi-diwas
ಹಿಂದಿ ದಿವಸ್ ಆಚರಣೆಗೆ ವಿರೋಧ: ಫ್ರೀಡಂ ಪಾರ್ಕ್ ನಲ್ಲಿ ಕರವೇ ಪ್ರತಿಭಟನೆ

By

Published : Sep 14, 2022, 4:24 PM IST

ಬೆಂಗಳೂರು: ಹಿಂದಿ ದಿವಸ್ ಆಚರಣೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಡಾ ನಾರಾಯಣಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಹಿಂದಿ ಹೇರಿಕೆ ನಿಲ್ಲಿಸಿ. ಹಿಂದಿ ದಿವಸ್ ನಮಗೆ ಬೇಡ ಎಂಬ ಫಲಕಗಳನ್ನು ಪ್ರದರ್ಶಿಸಿದರು. ರಾಷ್ಟ್ರಕವಿ ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಹಾಡನ್ನು ಹಾಡಿದರು.

ಸರ್ಕಾರದ ವೈಫಲ್ಯಗಳನ್ನು ಮುಚ್ಚಿಹಾಕಲು ಆಚರಣೆ :ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಅಧ್ಯಕ್ಷ ಡಾ ನಾರಾಯಣಗೌಡ, ಕೇಂದ್ರ ಸರ್ಕಾರದ ಹಿಂದಿ ದಿವಸ್ ಆಚರಣೆಗೆ ನಮ್ಮ ತೀವ್ರ ವಿರೋಧವಿದೆ. ಸ್ವಾತಂತ್ರ್ಯ ಬಂದು 75 ವರ್ಷವಾಗಿ ಅಮೃತ ಮಹೋತ್ಸವ ಆಚರಿಸಿದ್ದೇವೆ. ಒಂದು ರಾಷ್ಟ್ರ, ಒಂದೇ ಭಾಷೆ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ. ಆ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಭಾವನಾತ್ಮಕ ವಿಚಾರಗಳನ್ನು ಕೆದುಕುತ್ತಿದ್ದಾರೆ ಎಂದು ಟೀಕಿಸಿದರು.

ಹಿಂದಿ ದಿವಸ್​ ಆಚರಣೆಗೆ ಅವಕಾಶ ನೀಡಿದರೆ ಕನ್ನಡ ಮತ್ತು ಕನ್ನಡಿಗರಿಗೆ ಅನ್ಯಾಯವಾಗಲಿದೆ. ಯಾವುದೇ ಕಾರಣಕ್ಕೂ ಬಲವಂತದ ಹಿಂದಿ ದಿನಾಚರಣೆ ಆಚರಿಸಬಾರದು ಎಂದು ಒತ್ತಾಯಿಸುತ್ತಿದ್ದೇವೆ ಎಂದರು.

ಹಿಂದಿ ದಿವಸ್ ಆಚರಣೆಗೆ ವಿರೋಧ: ಫ್ರೀಡಂ ಪಾರ್ಕ್ ನಲ್ಲಿ ಕರವೇ ಪ್ರತಿಭಟನೆ

ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಣೆ: ಒಡಿಶಾದಲ್ಲಿ ಒರಿಯಾ, ಗುಜರಾತ್‍ನಲ್ಲಿ ಗುಜರಾತಿ ಹೀಗೆ ಒಂದೊಂದು ರಾಜ್ಯದಲ್ಲೂ ಒಂದೊಂದು ಭಾಷೆಯಿದೆ. ಒಟ್ಟು 56 ಪ್ರಮುಖ ಭಾಷೆಗಳು ಮತ್ತು ಭಾಷಿಕರು ಈ ರಾಷ್ಟ್ರದಲ್ಲಿ ನೆಲೆಸಿದ್ದಾರೆ. ಆಯಾ ರಾಜ್ಯಭಾಷೆಯ ಕತ್ತನ್ನು ಹಿಸುಕುವ ಕೆಲಸಕ್ಕೆ ನಮ್ಮ ವಿರೋಧವಿದೆ. ಜನತೆಯ ತೆರಿಗೆ ಹಣವನ್ನು ಖರ್ಚು ಮಾಡಿ ಹಿಂದಿ ದಿವಸ್ ಆಚರಣೆಯನ್ನು ಖಂಡಿಸುತ್ತೇವೆ. ಇದು ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ಎಂದು ದೂರಿದರು.

ಪ್ರಾದೇಶಿಕ ಭಾಷೆಗಳನ್ನು ಒಕ್ಕೂಟ ವ್ಯವಸ್ಥೆಯಲ್ಲಿ ಗೌರವಿಸಬೇಕು : ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುತ್ತಿದೆ. ಪ್ರಾದೇಶಿಕ ಭಾಷೆಗಳನ್ನು ಒಕ್ಕೂಟ ವ್ಯವಸ್ಥೆಯಲ್ಲಿ ಗೌರವಿಸಬೇಕು. ಭಾರತದ ಒಕ್ಕೂಟದ ವ್ಯವಸ್ಥೆಯಲ್ಲಿ ಬಲವಂತವಾದ ಹಿಂದಿ ದಿವಸ ಆಚರಣೆಗೆ ಅವಕಾಶ ನೀಡಬಾರದು ಎಂದು ಹೇಳಿದರು.

ಇದನ್ನೂ ಓದಿ :ಯಾರ‍್ಯಾರನ್ನೋ ಕರ್ಕೊಂಡು ಸರ್ಕಾರ ಮಾಡಿದ್ದೇವೆ, 8 ಶಾಸಕರು ರಾಜೀನಾಮೆ ನೀಡಿದ್ರೆ ಸರ್ಕಾರ ಬಿದ್ದು ಹೋಗುತ್ತೆ: ಸಂಸದ ಸಿದ್ದೇಶ್ವರ್

ABOUT THE AUTHOR

...view details