ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವ ಪರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು 200ಕ್ಕೂ ಹೆಚ್ಚು ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿವೆ. ಬೆಂಗಳೂರು ನಗರದಲ್ಲಿ 126 ಹೊಸ ಪಾಸಿಟಿವ್ ಕೇಸ್ ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು 9,399 ಕೋವಿಡ್ ಪ್ರಕರಣಗಳಿದ್ದು, ಇದರಲ್ಲಿ 5,730 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 3,523 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯಾದ್ಯಂತ ಇಂದು 111 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಂದು ಐವರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 142ಕ್ಕೆ ಏರಿಕೆಯಾಗಿದೆ.