ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿಂದು 47,754 ಹೊಸ ಕೋವಿಡ್ ಕೇಸ್​​​.. ದಿಢೀರ್​ ಹೆಚ್ಚಾಯ್ತು ಮರಣ ಪ್ರಮಾಣ!

Karnataka COVID update report: ಕರ್ನಾಟಕದಲ್ಲಿ ಕೊರೊನಾ ಮಹಾಮಾರಿ ಮೂರನೇ ಅಲೆ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ ದಾಖಲೆಯ ಮಟ್ಟದಲ್ಲಿ ಹೊಸ ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಸುಧಾಕರ್ ಟ್ವೀಟ್ ಮಾಡಿದ್ದಾರೆ.

Karnataka covid
Karnataka covid

By

Published : Jan 20, 2022, 6:36 PM IST

Updated : Jan 20, 2022, 9:09 PM IST

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದ್ದು, ನಿನ್ನೆಗೆ ಹೋಲಿಕೆ ಮಾಡಿದಾಗ ರಾಜ್ಯದಲ್ಲಿ ಇಂದು ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್​ ಟ್ವೀಟ್ ಮಾಡಿದ್ದಾರೆ.

ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 47,754 ಸಕ್ರಿಯ ಪ್ರಕರಣ ದಾಖಲಾಗಿದ್ದು, ಬೆಂಗಳೂರಿನಲ್ಲೇ ಅತ್ಯಧಿಕ 30,540 ಜನರಲ್ಲಿ ಮಹಾಮಾರಿ ಪತ್ತೆಯಾಗಿದೆ. ರಾಜ್ಯದಲ್ಲಿ ಸದ್ಯ ಪಾಸಿಟಿವಿಟಿ ರೇಟ್​ ಶೇ. 18.48ರಷ್ಟಿದೆ ಎಂದು ತಿಳಿಸಿದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ 22,143 ಜನರು ಕೋವಿಡ್​ನಿಂದ ಗುಣಮುಖರಾಗಿ ಡಿಸ್ಚಾರ್ಜ್​​ ಆಗಿದ್ದಾರೆ.

ಜಾಹೀರಾತು:ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 29 ಜನರು ಸಾವನ್ನಪ್ಪಿದ್ದು, ಬೆಂಗಳೂರಿನಲ್ಲೇ 8 ಜನರು ಉಸಿರು ಚೆಲ್ಲಿದ್ದಾರೆ. ಕಳೆದ 24 ಗಂಟೆಗಳಲ್ಲಿ 2,58,290 ಜನರಿಗೆ ಟೆಸ್ಟ್ ಮಾಡಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಜಿಲ್ಲಾವಾರು ಪ್ರಕರಣಗಳು

ವಿಮಾನ ನಿಲ್ದಾಣದಿಂದ 774 ಪ್ರಯಾಣಿಕರು ಆಗಮಿಸಿದ್ದು, ತಪಾಸಣೆಗೆ ಒಳಪಟ್ಟಿದ್ದಾರೆ. ಹೈ ರಿಸ್ಕ್ ದೇಶಗಳಿಂದ 570 ಪ್ರಯಾಣಿಕರು ಆಗಮಿಸಿದ್ದಾರೆ. ಬುಧವಾರ ಕೂಡ ರಾಜ್ಯಾದ್ಯಂತ 40 ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗಿದ್ದವು.

Last Updated : Jan 20, 2022, 9:09 PM IST

ABOUT THE AUTHOR

...view details