ಬೆಂಗಳೂರು:ದೇಶಾದಾದ್ಯಂತ ಬಿಜೆಪಿ ಆರಂಭಿಸಿರುವ ಸದಸ್ಯತಾ ಅಭಿಯಾನದಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಲಭಿಸಿದ್ದು ,ರಾಜ್ಯದಲ್ಲಿ ಪಕ್ಷದ ಸಂಘಟನಾ ಕಾರ್ಯವೈಖರಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸದಸ್ಯತ್ವ ಅಭಿಯಾನದ ಬೈಠಕ್ ನಡೆಯಿತು. ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನಡೆದ ಬೈಠಕ್ ನಲ್ಲಿ ಸದಸ್ಯತ್ವ ಅಭಿಯಾನದ ರಾಜ್ಯ ಸಂಚಾಲಕ ರವಿಕುಮಾರ್, ರಾಜ್ಯದಲ್ಲಿ ನಡೆದಿರುವ ಅಭಿಯಾನದ ವಿವರ ಸಲ್ಲಿಕೆ ಮಾಡಿದರು. ಈವರೆಗೆ ಒಟ್ಟು 27.77 ಲಕ್ಷ ಸದಸ್ಯತ್ವವನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.