ಕರ್ನಾಟಕ

karnataka

ETV Bharat / state

ಸಿಇಟಿ ಪರೀಕ್ಷೆ ಮುಂದೂಡಿಕೆ, ದಿನಾಂಕ ಮರು ನಿಗದಿ

ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8 ರಂದು ನಡೆಸಲು ತೀರ್ಮಾನಿಸಲಾಗಿತ್ತು, ಆದರೆ, ಇದೀಗ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29 ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

karnataka-state-cet-exam-postpone-news
ಸಿಇಟಿ ಪರೀಕ್ಷೆ ಮುಂದೂಡಿಕೆ

By

Published : May 12, 2021, 5:27 PM IST

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ, ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿದ್ದು, ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಸಹ ಮುಂದೂಡಿ, ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ.

ಸಿಇಟಿ ಪರೀಕ್ಷೆ ಮುಂದೂಡಿಕೆ

ಈ ಹಿಂದೆ ಸಿಇಟಿ ಪರೀಕ್ಷೆಯನ್ನು ಜುಲೈ 7 ಮತ್ತು 8 ರಂದು ನಡೆಸಲು ತೀರ್ಮಾನಿಸಲಾಗಿತ್ತು, ಆದರೆ, ಇದೀಗ ಸಿಇಟಿ ಪರೀಕ್ಷೆಯನ್ನು ಮುಂದೂಡಿ, ಆಗಸ್ಟ್ 28 ಮತ್ತು 29 ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ. ಹಾಗೇ ಸದ್ಯದಲ್ಲೇ ಆನ್​​ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.‌ ಹೆಚ್ಚಿನ ಮಾಹಿತಿಗಾಗಿ, http://kea.kar.nic.in ಗೆ ಭೇಟಿ ನೀಡಬಹುದಾಗಿದೆ.

ಸಿಇಟಿ ಪರಿಷ್ಕ್ರತ ವೇಳಾಪಟ್ಟಿ ಹೀಗಿದೆ:

28-8-2021- ಜೀವವಿಜ್ಞಾನ, ಗಣಿತ
29-8-2021- ಭೌತವಿಜ್ಞಾನ, ರಸಾಯನ ವಿಜ್ಞಾನ
30-8-2021- ಕನ್ನಡ

ಸಾಮಾನ್ಯ ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುತ್ತಿದ್ದ ಸಿಇಟಿ ಪರೀಕ್ಷೆಯು ಜುಲೈನಲ್ಲಿ ನಡೆಸಲು ಮುಂದಾಗಿತ್ತು. ಇದೀಗ ಕೋವಿಡ್ ಕಾರಣಕ್ಕೆ ಆಗಸ್ಟ್ ಅಂತ್ಯದಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.

ABOUT THE AUTHOR

...view details