ಬೆಂಗಳೂರು: ಪ್ರವಾಹದಿಂದ ನಲುಗಿ ಹೋಗಿರುವ ಸಂತ್ರಸ್ತರಿಗೆ ಪರಿಹಾರಾರ್ಥವಾಗಿ ರಾಜ್ಯ ಸರ್ಕಾರ ನಡಿ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಅಕಾಲಿಕ ಮಳೆಯಿಂದ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿ ಹೋಗಿದೆ. ಆಗಸ್ಟ್ ನವೆಂಬರ್ ತಿಂಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಅಪಾರ ಹಾನಿ ಸಂಭವಿಸಿದೆ. ಇದೀಗ ರಾಜ್ಯ ಸರ್ಕಾರ ತುರ್ತು ಪರಿಹಾರ ಹಾಗೂ ಮನೆ ಹಾನಿ ಪರಿಹಾರಕ್ಕಾಗಿ SDRFನಡಿ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಒಟ್ಟು 418.72 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ.
ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ 164.85 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದ ವಿಪತ್ತು ಪರಿಹಾರ ನಿಧಿಯಡಿ (SDRF) ಹೆಚ್ಚುವರಿ ಮೊತ್ತದಿಂದ ರೂ.253.87 ಕೋಟಿ ಸೇರಿ ಒಟ್ಟು 418.72 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ನೆರೆಗೆ ಗೃಹೋಪಯೋಗಿ ವಸ್ತುಗಳ ಹಾನಿಗೊಳಗಾದ 85,862 ಸಂತ್ರಸ್ತರನ್ನು ಗುರುತಿಸಲಾಗಿದೆ. ಪೂರ್ಣ ಹಾಗೂ ತೀವ್ರ ಹಾನಿಗೊಳಗಾದ 11,455 ಸಂತ್ರಸ್ತರು, ಭಾಗಶಃ ಹಾನಿಗೊಳಗಾದ 44,786 ಸಂತ್ರಸರಿಗೆ ಪರಿಹಾರ ಮೊತ್ತ ನೀಡಲಾಗುವುದು.