ಕರ್ನಾಟಕ

karnataka

ETV Bharat / state

District incharge ministers: ಜಿಲ್ಲಾ ಉಸ್ತುವಾರಿ ಸಚಿವರ ನೇಮಕ; ಕೃಷ್ಣ ಭೈರೇಗೌಡ, ರಹೀಂಖಾನ್​ ಅವರಿಗಿಲ್ಲ ಉಸ್ತುವಾರಿ ಹೊಣೆ - district incharge ministers

ಜಿಲ್ಲೆಗಳಿಗೆ ಯಾರು ಉಸ್ತುವಾರಿ ಸಚಿವರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನು ನೇಮಿಸಲಾಗಿದೆ.

State govt issued an order appointing district in charges
State govt issued an order appointing district in charges

By

Published : Jun 9, 2023, 2:45 PM IST

Updated : Jun 9, 2023, 3:20 PM IST

ಬೆಂಗಳೂರು:ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಜಿಲ್ಲೆಯ ಉಸ್ತುವಾರಿ ವಹಿಸಿಲ್ಲ. ಹಿರಿಯ ಸಚಿವ ಕೃಷ್ಣಭೈರೇಗೌಡ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಿಲ್ಲ.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಬಹುತೇಕ ಆಯಾ ಜಿಲ್ಲೆಯ ಸಚಿವರುಗಳನ್ನೇ ತವರು ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ಮತ್ತು ಬೆಳಗಾವಿ ಸೇರಿದಂತೆ ಒಬ್ಬರಿಗಿಂತ ಹೆಚ್ಚು ಸಚಿವರಿರುವ ಜಿಲ್ಲೆಗಳಲ್ಲಿ ಸಚಿವರನ್ನು ಬೇರೊಂದು ಜಿಲ್ಲೆಗೆ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಸಂಪುಟದಲ್ಲಿ ಪ್ರಾತಿನಿಧ್ಯ ದೊರೆಯದ ಜಿಲ್ಲೆಗಳಿಗೆ ಹೊರ ಜಿಲ್ಲೆಯ ಸಚಿವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಲಾಗಿದೆ. ಸಚಿವರಾದ ಡಾ.ಹೆಚ್.ಸಿ. ಮಹದೇವಪ್ಪರನ್ನು ಮೈಸೂರು ಜಿಲ್ಲೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರು ನಗರ ಹಾಗೂ ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿ ಮೇಲೆ ಕಣ್ಣಿಟ್ಟಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರನ್ನು ರಾಮನಗರ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿದೆ. ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ತುಮಕೂರು ಜಿಲ್ಲಾ ಉಸ್ತುವಾರಿ ಸಿಕ್ಕಿದೆ.

ಇನ್ನುಳಿದಂತೆ, ಕೆ.ಜೆ. ಜಾರ್ಜ್, ಪ್ರಿಯಾಂಕ್​ ಖರ್ಗೆ, ಈಶ್ವರ್​ ಖಂಡ್ರೆ, ಸತೀಶ್​ ಜಾರಕಿಹೊಳಿ, ಮುನಿಯಪ್ಪ, ಎಂ.ಬಿ. ಪಾಟೀಲ್, ದಿನೇಶ್​ ಗುಂಡೂರಾವ್, ಎಸ್.​ಎಸ್.​ ಮಲ್ಲಿಕಾರ್ಜುನ್​, ಸಂತೋಷ್ ಲಾಡ್, ಶರಣ್​ ಪ್ರಕಾಶ್​ ಪಾಟೀಲ್​ ಸೇರಿದಂತೆ 31 ಜಿಲ್ಲೆಗೂ ಉಸ್ತುವಾರಿಗಳ ನೇಮಕವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ

ಲಾಡ್ ಬಾಯಿಗೆ 'ಧಾರವಾಡ ಪೇಡಾ': ಧಾರವಾಡ ಜಿಲ್ಲಾ ಉಸ್ತುವಾರಿಗೆ ಕಾಂಗ್ರೆಸ್ ಆಂತರಿಕ ವಲಯದಲ್ಲಿ ನಡೆದಿದ್ದ ತೀವ್ರ ಪೈಪೋಟಿಗೆ ಈ ಮೂಲಕ ತೆರೆ ಬಿದ್ದಂತಾಗಿದೆ. ಜಿಲ್ಲೆಯಲ್ಲಿ ಸಂತೋಷ್ ಲಾಡ್ ಸಚಿವರಿದ್ದಾಗಲೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಸಕ್ತಿ ವಹಿಸಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಲಾಡ್ ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದು ಆಂತರಿಕ ವಲಯದಲ್ಲಿ ನಡೆದಿದ್ದ ಪೈಪೋಟಿಗೆ ಕಡಿವಾಣ​ ಬಿದ್ದಿದೆ.

ಸಂತೋಷ ಲಾಡ್

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದಲ್ಲಿ ಧಾರವಾಡ ಜಿಲ್ಲೆಗೆ ಒಂದೇ ಒಂದು ಸಚಿವ ಸ್ಥಾನ ದೊರೆತಿದೆ. ತೀವ್ರ ಪೈಪೋಟಿಯ ನಡುವೆ ಕಲಘಟಗಿ ಶಾಸಕ ಸಂತೋಷ ಲಾಡ್ ಸಚಿವರಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಬಳಿಕ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಯಾರಾಗುತ್ತಾರೆ ಎಂಬ ಕುತೂಹಲವಿತ್ತು. ನಿರೀಕ್ಷೆಯಂತೆ ಲಾಡ್ ಅವರು ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ.

ಇದನ್ನೂ ಓದಿ:Siddaramaiah : ಶಕ್ತಿ ಯೋಜನೆಗೆ ಚಾಲನೆ ನೀಡಲು ಬಿಎಂಟಿಸಿ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದರಾಮಯ್ಯ!

Last Updated : Jun 9, 2023, 3:20 PM IST

ABOUT THE AUTHOR

...view details