ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳಿಗೆ ಹಣ ಸಂಗ್ರಹಿಸಿ ಸಮಾಜದ ಸ್ವಾಸ್ಯ ಹಾಳು ಮಾಡಲು ಸಂಚು ರೂಪಿಸಿದ್ದ ಆರೋಪದಡಿ ಪಿಎಫ್ಎ ಮುಖಂಡರ ಹಾಗೂ ಕಾರ್ಯಕರ್ತರ ಮೇಲೆ ದಾಳಿ ಮುಂದುವರೆದಿದೆ. ದೇಶ-ವಿದೇಶಗಳಿಂದ ಹಣ ಸಂಗ್ರಹ ಆಪಾದನೆಯಡಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಪಿಎಫ್ಐಗೆ ಸೇರಿದ ವ್ಯಕ್ತಿಗಳ ಮೇಲೆ ಇಂದು ಬೆಳ್ಳಂಬೆಳ್ಳಗೆ ರಾಜ್ಯ ಪೊಲೀಸರು ದಾಳಿ ನಡೆಸಿ 40 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದೇಶ-ವಿದೇಶಗಳಿಂದ ದೇಣಿಗೆ ಸಂಗ್ರಹಿಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ಇತ್ತೀಚೆಗೆ ಎನ್ಐಎ ದೇಶದ ಎಲ್ಲಾ ಕಡೆಗಳಲ್ಲಿ ದಾಳಿ ಪ್ರಮುಖ ಮುಖಂಡರನ್ನು ವಶಕ್ಕೆ ಪಡೆದುಕೊಂಡಿತ್ತು. ರಾಜ್ಯವಲ್ಲದೆ ಬೆಂಗಳೂರು ನಗರ ಪೊಲೀಸರು ಸಹ ಕಾರ್ಯಕರ್ತರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ 15 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ವಿಚಾರಣೆ ವೇಳೆ ರಾಜ್ಯದ ಉದ್ದಗಲಕ್ಕೂ ಪಿಎಫ್ಐ ಜೊತೆ ನಂಟು ಹೊಂದಿದ ಆರೋಪ ಹಿನ್ನೆಲೆಯಲ್ಲಿ ಬೀದರ್, ರಾಯಚೂರು, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.