ಬೆಂಗಳೂರು: ರಾಜ್ಯದಲ್ಲಿ ಇಂದು 3377 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, 34 ಸೋಂಕಿತರು ಬಲಿಯಾಗಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 8,35,773ಕ್ಕೆ ಏರಿಕೆ ಆಗಿದೆ. ಇತ್ತ ಸೋಂಕಿಗೆ 34 ಮಂದಿ ಮೃತರಾಗಿದ್ದು, ಸಾವಿನ ಸಂಖ್ಯೆ 11,281ಕ್ಕೆ ಏರಿಕೆ ಆಗಿದೆ. ಇಂದು 8045 ಸೋಂಕಿತರು ಗುಣಮುಖರಾಗಿದ್ದು, ಇಲ್ಲಿಯವರೆಗೆ 7,88,780 ಜನರು ಡಿಸ್ಜಾರ್ಜ್ ಆಗಿದ್ದಾರೆ. 19 ಮಂದಿ ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ.
ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಸದ್ಯ 35,693 ಇದ್ದು, 928 ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಕಳೆದ 7 ದಿನಗಳಿಂದ 51,683 ಮಂದಿ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಪ್ರಾಥಮಿಕವಾಗಿ 2,61,132 ಮಂದಿ ಹಾಗೂ 2,60,820 ಜನರು ಸೋಂಕಿತರ ದ್ವಿತೀಯ ಸಂಪರ್ಕದಲ್ಲಿ ಇದ್ದಾರೆ. ವಿಮಾನ ನಿಲ್ದಾಣದಲ್ಲಿ 393 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ.
ರಾಜ್ಯದಲ್ಲಿ ಸೋಂಕಿನ ಖಚಿತ ಪ್ರಕರಣಗಳ ಶೇಕಡವಾರು ಪ್ರಮಾಣ 3.29ರಷ್ಟು ಇದ್ದು, ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೆ. 1.0ರಷ್ಟು ಇದೆ. ಇಂದು 1,02,503 ಮಂದಿಗೆ ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದ್ದು, ಇದರಲ್ಲಿ 3,377 ಜನರಿಗೆ ಸೋಂಕು ದೃಢಪಟ್ಟಿದೆ.