ಬೆಂಗಳೂರು:ರಾಜ್ಯದಲ್ಲಿಂದು 1,236 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 10 ಮಂದಿ ಮೃತಪಟ್ಟಿದ್ದಾರೆ.
ಇಂದು 1497 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 15,205 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 8,78,696 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 9,05,901ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 11,981ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 229 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಜಧಾನಿಯಲ್ಲಿ ಕೊರೊನಾ:
ರಾಜ್ಯದಲ್ಲಿಂದು 1236 ಜನರಿಗೆ ಕೊರೊನಾ, 10 ಮಂದಿ ಸೋಂಕಿಗೆ ಬಲಿ ನಗರದಲ್ಲಿಂದು 689 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, 7 ಜನ ಮೃತಪಟ್ಟಿದ್ದಾರೆ. ಸೋಂಕಿತರ ಒಟ್ಟು ಸಂಖ್ಯೆ 3,80,936ಕ್ಕೆ ಏರಿಕೆಯಾಗಿದೆ. ಇಂದು 866 ಮಂದಿ ಬಿಡುಗಡೆಗೊಂಡಿದ್ದಾರೆ. ಈವರೆಗೆ ಒಟ್ಟು 3,66,445 ಮಂದಿ ಗುಣಮುಖರಾಗಿದ್ದಾರೆ.
ಓದಿ: ಅಕ್ರಮ ಸಂಬಂಧ ವಿಚಾರಕ್ಕೆ ಪತಿಯ ಹತ್ಯೆ: ಪತ್ನಿ-ಪ್ರಿಯಕರ ಸೇರಿ ಮೂವರ ಬಂಧನ
ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ ಇಳಿಕೆಯಾಗಿದ್ದು, 10,238 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಏಳು ಮಂದಿ ಮೃತಪಟ್ಟಿದ್ದು, ಕೋವಿಡ್ ಸೋಂಕಿನಿಂದ ಈವರೆಗೆ 4252 ಮಂದಿ ಅಸುನೀಗಿದ್ದಾರೆ.