ಬೆಂಗಳೂರು:ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಅಂತಿಮ ಕೀ ಉತ್ತರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ಉತ್ತರಗಳನ್ನು ಪರಿಶೀಲಿಸಿಕೊಳ್ಳಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಪತ್ರಿಕೆ-1 ಮತ್ತು ಪತ್ರಿಕೆ-2ಕ್ಕೆ ಸಂಬಂಧಿಸಿದಂತೆ ಕೀ-ಉತ್ತರಗಳನ್ನು ದಿನಾಂಕ 09 ನವೆಂಬರ್ 2022 ರಂದು ಇಲಾಖಾ ವೆಬ್ ಸೈಟ್ https://schooleducation.kar.nic.in ನಲ್ಲಿ ಪ್ರಕಟಿಸಲಾಗಿತ್ತು. ಸದರಿ ಕೀ-ಉತ್ತರಗಳಿಗೆ ಆನ್‌ಲೈನ್ ಮೂಲಕ ಸೂಕ್ತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಲು 10 ನವೆಂಬರ್ 2022 ರಿಂದ 17 ನವೆಂಬರ್ 2022 ರವರೆಗೆ ಕಾಲಾವಕಾಶ ನೀಡಲಾಗಿತ್ತು.