ಕರ್ನಾಟಕ

karnataka

ETV Bharat / state

ಆ. 22ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ : ಕೋವಿಡ್ ನಿಯಮ ಪಾಲನೆಗೆ ಸರ್ಕಾರ ಸೂಚನೆ - ಸಾರ್ವಜನಿಕ ಶಿಕ್ಷಣ ಇಲಾಖೆ

2021ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ವೇಳಾ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೇಳಿದೆ.

karnataka-teachers-eligibility-test-on-august-22
ಆ. 22ರಂದು ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ

By

Published : Aug 16, 2021, 7:25 PM IST

ಬೆಂಗಳೂರು :ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET 2021) ಈಗಾಗಲೇ ನಿಗದಿಪಡಿಸಿದಂತೆ ಆಗಸ್ಟ್ 22ರಂದು (ಭಾನುವಾರ) ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅನುಮತಿ ಪಡೆಯಲಾಗಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಸೂಚನೆ

ವಾರಾಂತ್ಯದ ಕರ್ಫ್ಯೂ ಹಾಗೂ ಸ್ಥಳೀಯ ನಿರ್ಬಂಧಗಳು ಜಾರಿಯಲ್ಲಿರುವ ಜಿಲ್ಲೆಗಳಲ್ಲಿನ ಪರೀಕ್ಷಾರ್ಥಿಗಳು ತಮ್ಮ ಅಧಿಕೃತ ಗುರುತಿನ ಚೀಟಿ ಹಾಗೂ ಟಿ.ಇ.ಟಿ ಪ್ರವೇಶ ಪತ್ರಗಳನ್ನು ತೋರಿಸಿ, ಸ್ವಂತ/ಸಾರ್ವಜನಿಕ ವಾಹನಗಳಲ್ಲಿ ಪರೀಕ್ಷೆಗೆ ಹಾಜರಾಗಬಹುದು. 2021ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET 2021) ವೇಳಾ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಇಲಾಖೆ ಹೇಳಿದೆ.

ವೇಳಾಪಟ್ಟಿ

ಈ ಬಗ್ಗೆ ಪರೀಕ್ಷಾರ್ಥಿಗಳು ಯಾವುದೇ ಆತಂಕ/ಗೊಂದಲಕ್ಕೆ ಒಳಗಾಗದಂತೆ ಸೂಕ್ತ ಸಿದ್ಧತೆಗಳೊಂದಿಗೆ ಪರೀಕ್ಷೆಗೆ ಹಾಜರಾಗಲು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ಇದನ್ನೂ ಓದಿ:'ಮಾರ್ಟಿನ್' ಅವತಾರ ತಾಳಿದ 'ಭರ್ಜರಿ' ಹುಡುಗ

ABOUT THE AUTHOR

...view details