ಬೆಂಗಳೂರು:ಕೊರೊನಾ ಸಂಕಷ್ಟದ ನಡುವೆಯೂ ಬಂಡವಾಳ ಹೂಡಿಕೆ ಪ್ರಸ್ತಾವದಲ್ಲಿ ದೇಶದಲ್ಲೇ ನಮ್ಮ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ “ಮುಕ್ತ ಅವಕಾಶದ ಮೂಲಕ ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್ ಶಕ್ತಿಯನ್ನು ಪೂರೈಸುವ” (Procurement of Cheaper Electricity for industries through open access in the state of Karnataka) ಬಗ್ಗೆ ಅಸೋಚಾಮ್ (ASSOCHAM) ಆಯೋಜಿಸಿದ್ದ ವೆಬಿನಾರ್ ಉದ್ಘಾಟಿಸಿ ಶೆಟ್ಟರ್ ಮಾತನಾಡಿದರು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಮಾಹಿತಿ ಅನ್ವಯ, ನಮ್ಮ ರಾಜ್ಯದಲ್ಲಿ 1,54,937 ಕೋಟಿ ರೂ ಮೊತ್ತದ 95 ಹೂಡಿಕೆಯ ಪ್ರಸ್ತಾವನೆಗಳು ನೋಂದಣಿಯಾಗಿವೆ. ಈ ಮೂಲಕ ನಮ್ಮ ರಾಜ್ಯವು ಹೂಡಿಕೆ ಪ್ರಸ್ತಾವದ ವಿಚಾರದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ ಎಂದರು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಮಾಹಿತಿ ಅನ್ವಯ ನಮ್ಮ ರಾಜ್ಯದಲ್ಲಿ 1,54,937 ಕೋಟಿ ಮೊತ್ತದ 95 ಹೂಡಿಕೆಯ ಪ್ರಸ್ತಾವನೆಗಳು ನೋಂದಣಿಯಾಗಿವೆ. ಈ ಮೂಲಕ ನಮ್ಮ ರಾಜ್ಯವು ಹೂಡಿಕೆ ಪ್ರಸ್ತಾವದ ವಿಚಾರದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರಾಜ್ಯವನ್ನು ದೇಶದಲ್ಲಿ ಕೈಗಾರಿಕಾ ಸ್ನೇಹಿ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಸಫಲವಾಗುತ್ತಿರುವುದು ಈ ಮೂಲಕ ಗೋಚರವಾಗುತ್ತಿವೆ.