ಕರ್ನಾಟಕ

karnataka

ETV Bharat / state

ನಾಳೆಯಿಂದ ಎರಡು ದಿನ ಕರ್ನಾಟಕ ಪ್ರವಾಸೋದ್ಯಮ ನೀತಿ ಕಾರ್ಯಾಗಾರ.. - Karnataka Tourism Policy Workshop

ನಾಳೆಯಿಂದ ಎರಡು ದಿನಗಳ ಕಾಲ ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2020-25 ಕಾರ್ಯಾಗಾರವನ್ನು ಸರ್ಕಾರ ಆಯೋಜಿಸಿದೆ.

cm
ಬಿ.ಎಸ್. ಯಡಿಯೂರಪ್ಪ

By

Published : Dec 18, 2019, 12:03 AM IST

ಬೆಂಗಳೂರು:ಪ್ರವಾಸಿಗರನ್ನು ಹೆಚ್ಚು ಸೆಳೆಯುವ ಉದ್ದೇಶದಿಂದ ಪ್ರವಾಸಿತಾಣಗಳನ್ನು ಖಾಸಗಿಯವರಿಗೆ ವಹಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು 2020-25ರ ಕರ್ನಾಟಕ ಪ್ರವಾಸೋದ್ಯಮ ನೀತಿಯಲ್ಲಿ ಪ್ರಸ್ತಾಪಿಸಲಾಗುತ್ತಿದೆ. ಈ ಸಂಬಂಧ ನಾಳೆಯಿಂದ ಎರಡು ದಿನಗಳ ಕಾಲ (ಡಿ.18,19) ಖಾಸಗಿ ಹೋಟೆಲ್‌ನಲ್ಲಿ ಕರ್ನಾಟಕ ಪ್ರವಾಸೋದ್ಯಮ ನೀತಿ 2020-25 ಕಾರ್ಯಾಗಾರವನ್ನು ಸರ್ಕಾರ ಆಯೋಜಿಸಿದೆ.

ನಾಳೆ ಬೆಳಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಈ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದು, ಪ್ರವಾಸೋದ್ಯಮ ಸಚಿವ ಸಿ ಟಿ ರವಿ, ಸಚಿವರಾದ ಆರ್.ಅಶೋಕ್, ಇನ್ಫೋಸಿಸ್ ಪ್ರತಿಷ್ಠಾನ, ಕರ್ನಾಟಕ ಟೂರಿಸಂ ಟಾಸ್ಕ್ ಪೋರ್ಟ್ ಅಧ್ಯಕ್ಷೆ ಸುಧಾಮೂರ್ತಿ, ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಭಾಸ್ಕರ್ ಮತ್ತಿತರರು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ.

ಕರ್ನಾಟಕದಲ್ಲಿ ಅತ್ಯಾಕರ್ಷಕ ಪ್ರವಾಸಿ ತಾಣಗಳಿವೆ. ರಮಣೀಯ ಸ್ಥಳಗಳೂ ಇವೆ. ಆದರೆ, ಪ್ರವಾಸಿತಾಣಗಳ ಅಭಿವೃದ್ಧಿ ಮಾತ್ರ ಅಷ್ಟಾಗಿ ಆಗಿಲ್ಲ. ಹಾಗಾಗಿಯೇ ಪ್ರವಾಸಿತಾಣಗಳನ್ನು ಖಾಸಗಿಯವರಿಗೆ ವಹಿಸಲು ಸರ್ಕಾರ ಮುಂದಾಗಿದೆ. ಇದರ ಸಾಧಕ-ಬಾಧಕಗಳ ಕುರಿತು ಈ ಕಾರ್ಯಾಗಾರ ಆಯೋಜಿಸಲಾಗಿದೆ.

ಪ್ರವಾಸಿತಾಣಗಳಿಗೆ ಪ್ರವಾಸಿಗರನ್ನು ಹೆಚ್ಚು ಆಕರ್ಷಿಸಲು ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸುತ್ತಿದೆ. ಪ್ರಮುಖ ಪ್ರವಾಸಿ ತಾಣ ನಂದಿಬೆಟ್ಟಕ್ಕೆ ರೋಪ್‌ವೇ, ರಾಮದೇವರ ಬೆಟ್ಟದಲ್ಲಿ ಲೇಸರ್ ಶೋ ಸೇರಿ ಹಲವು ಯೋಜನೆಗಳನ್ನು ರೂಪಿಸಲಾಗಿದೆ. ಪ್ರವಾಸಿ ತಾಣಗಳಲ್ಲಿ ಸಮರ್ಪಕ ಮೂಲಸೌಕರ್ಯವಿಲ್ಲದಿರುವುದು ಪ್ರವಾಸಿಗರ ಸಂಖ್ಯೆ ಕಡಿಮೆ ಇದೆ. ಹಾಗಾಗಿ, ಪ್ರಮುಖ ಯೋಜನೆಗಳ ಅನುಷ್ಠಾನ ಹಾಗೂ ಮೂಲಸೌಕರ್ಯ ಕಲ್ಪಿಸಲು ಖಾಸಗಿ ಸಹಭಾಗಿತ್ವಕ್ಕೆ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ABOUT THE AUTHOR

...view details