ಬೆಂಗಳೂರು: ಕರಾವಳಿಯ ಬಹುತೇಕ ಕಡೆಗಳು ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿರುವುದು ಬಿಟ್ಟರೆ ರಾಜ್ಯದ ಉಳಿದೆಡೆಗಳಲ್ಲಿ ನೈಋತ್ಯ ಮುಂಗಾರು ಮಳೆ ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ದುರ್ಬಲ: ಕರಾವಳಿ ಭಾಗದಲ್ಲಿ ಮುಂದುವರಿದ ವರ್ಷಧಾರೆ - state rain updates
ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ದುರ್ಬಲವಾಗಿದೆ. ಆದರೆ, ಕರಾವಳಿ ಭಾಗದಲ್ಲಿ ಮಳೆ ಸುರಿಯುತ್ತಿದೆ.
ಇಂದು ಕರಾವಳಿಯ ಬಹುತೇಕ ಭಾಗಗಳು, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಲಿದೆ. ಜುಲೈ 23ರ ವರೆಗೆ(ನಾಳೆ) ಈ ಭಾಗಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇದ್ದು, ಇಂದು ಹಗುರ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ. 2 ದಿನ ಮುಂದುವರೆಯುವ ಸಾಧ್ಯತೆಯೂ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:ಮಡಿಕೇರಿ: ಭೂಮಿಯಿಂದ ಕೇಳಿಬಂದ ಭಾರಿ ಪ್ರಮಾಣದ ಶಬ್ದ, ನಿಶಾನಿ ಬೆಟ್ಟದಲ್ಲಿ ಬಿರುಕು