ಬೆಂಗಳೂರು:ಇಂದಿನಿಂದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈಗಾಗಲೇ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾಗಮಂಡಲದಲ್ಲಿ 4 ಸೆಂ.ಮೀ, ಕಾರವಾರದಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 36.4 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 37.4, ಬಾಗಲಕೋಟೆ 34.2, ಮೈಸೂರಿನಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.