ಬೆಂಗಳೂರು:ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನವೆಂಬರ್ 3ರವರೆಗೆ ಸಿಡಿಲು, ಗಾಳಿ ಸಹಿತ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಮತ್ತು ಹಿಂಗಾರು ಮಾರುತಗಳಿಂದಾಗಿ ಮಳೆಯ ಅಬ್ಬರ ಹೆಚ್ಚಾಗಲಿದೆ. ನವೆಂಬರ್ 1ರಂದು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ.