ಬೆಂಗಳೂರು:ಇಂದು ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಳಗ್ಗೆ ಚಳಿಯ ಜೊತೆಗೆ ಮೋಡ ಕವಿದ ವಾತಾವರಣ ಜನರನ್ನು ಮತ್ತಷ್ಟು ನಡುಗುವಂತೆ ಮಾಡಿದೆ. ಕೋಲಾರ ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಚಳಿಯ ಪ್ರಮಾಣ ಕಳೆದ ಒಂದು ವಾರಕ್ಕಿಂತ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 27 ಮತ್ತು ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.
ಗರಿಷ್ಠ-ಕನಿಷ್ಠ ಉಷ್ಣಾಂಶ:
ಬೆಂಗಳೂರು ನಗರದಲ್ಲಿ ಗರಿಷ್ಠ 27 - ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಮೈಸೂರು 29 - ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಮಂಗಳೂರು 33 - ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಹುಬ್ಬಳ್ಳಿ 31 - ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 29 - ಕನಿಷ್ಠ 17 ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ 30 - ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.
ತರಕಾರಿ ಬೆಲೆಗಳಲ್ಲಿ ಏರಿಕೆ:
ರಾಜ್ಯದಲ್ಲಿ ನಿರಂತರ ಮಳೆ ಸುರಿದಿದ್ದರಿಂದ ಮಾರುಕಟ್ಟೆಗಳಿಗೆ ಹಣ್ಣು, ತರಕಾರಿಯ ಪೂರೈಕೆ ಆಗುತ್ತಿಲ್ಲ. ಪರಿಣಾಮ ತರಕಾರಿ ಬೆಲೆಯಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಚಳಿಯಲ್ಲಿ ಕೂಡ ಬೆಲೆ ಏರಿಕೆ ಗ್ರಾಹಕರ ಜೇಬನ್ನು ಸುಡುತ್ತಿದೆ.
ಇದನ್ನೂ ಓದಿ:ಹಿಂದೂ ದೇಗುಲಗಳನ್ನು ಕಾನೂನಿನ ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ: ಬೊಮ್ಮಾಯಿ