ಬೆಂಗಳೂರು: ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ಹೆಚ್ಚಾಗಲಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ವಿಜಯಪುರ, ಕಲಬುರಗಿ, ಯಾದಗಿರಿ, ಹಾವೇರಿ, ಧಾರವಾಡ, ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.