ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ - ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಕರಾವಳಿ ತೀರದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 65 ಕಿ.ಮೀ ತಲುಪುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

karnataka-weather-report
ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

By

Published : Aug 8, 2022, 3:44 PM IST

ಬೆಂಗಳೂರು:ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ ಆಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್​ ಹಾಗೂ ಆಗಸ್ಟ್​ 10 ಮತ್ತು 11ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಶಿವಮೊಗ್ಗ, ಬೆಳಗಾವಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಕರಾವಳಿ ತೀರದಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 65 ಕಿ.ಮೀ ತಲುಪುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಒಂದೆರಡು ಬಾರಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:ಹವಾಮಾನ ವೈಪರೀತ್ಯದಿಂದ ಆರಂಭವಾಗದ ಮೀನುಗಾರಿಕೆ: ಕೆಲಸವಿಲ್ಲದೇ ಖಾಲಿ ಕುಳಿತ ಕಡಲ ಮಕ್ಕಳು!

ABOUT THE AUTHOR

...view details