ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ರಾಜ್ಯದ ಹಲವೆಡೆ ಎರಡು ದಿನ ಮಳೆ ಮುಂದುವರೆಯಲಿದೆ. ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದ ಹಲವೆಡೆ ಮಳೆ ಎಚ್ಚರಿಕೆ - ರಾಜ್ಯದ ಹಲವೆಡೆ ಮಳೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಹವಾಮಾನ ಇಲಾಖೆಯು ರಾಜ್ಯದ ಹಲವೆಡೆ ಮಳೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ: ರಾಜ್ಯದ ಹಲವೆಡೆ ಮಳೆ ಎಚ್ಚರಿಕೆ
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು ಸಹಿತ ವರ್ಷಧಾರೆ ಆಗಲಿದೆ. ಅಂತೆಯೇ ಉತ್ತರ ಒಳನಾಡು ಭಾಗದಲ್ಲಿಯೂ ಮಳೆ ಬೀಳಲಿದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ:ರೊಟ್ಟಿ ಮಾಡುವಾಗ ಮನೆಗೋಡೆ ಕುಸಿತ: ಅವಶೇಷಗಳಡಿ ಸಿಲುಕಿದ್ದ ಮಹಿಳೆಯ ರಕ್ಷಣೆ.. ವಿಡಿಯೋ!