ಬೆಂಗಳೂರು: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ: ಹವಾಮಾನ ಇಲಾಖೆ - ಕರ್ನಾಟಕದಲ್ಲಿ ಭಾರಿ ಮಳೆ ನಿರೀಕ್ಷೆ
ಕರ್ನಾಟಕದಲ್ಲಿ ಇನ್ನೂ ಎರಡು ದಿನ ಜೋರು ಮಳೆಯಾಗುವ ನಿರೀಕ್ಷೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತು ನಾಳೆ ಹಾಗೂ ನಾಡಿದ್ದು ಹೆಚ್ಚು ಮಳೆಯಾಗಲಿದ್ದು, 27ರ ನಂತರ ಮಳೆರಾಯನ ಆರ್ಭಟ ತಗ್ಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 24ರಿಂದ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದ್ದು, 27-28ರಂದು ಒಣಹವೆ ಮುಂದುವರೆಯಲಿದೆ.
ಬೆಳಗಾವಿ, ಹಾವೇರಿ, ಗದಗ ಧಾರವಾಡ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು, ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಪ್ರದೇಶಗಳಲ್ಲೂ ಮಳೆಯಾಗಲಿದೆ. ಇನ್ನು ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ ಭಾಗದಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು ಯೆಲೋ ಅಲರ್ಟ್ ನೀಡಲಾಗಿದೆ.