ಬೆಂಗಳೂರು : ಸಿದ್ದರಾಮಯ್ಯರನ್ನು ಮುಖ್ಯಮಂತ್ರಿಯಾಗಿ ಮಾಡುವಂತೆ ಕರ್ನಾಟಕ ಕುರುಬರ ಸಂಘ ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿದೆ.
ಆನಂದರಾವ್ ವೃತ್ತದ ಬಳಿಯ ಖಾಸಗಿ ಹೋಟೆಲ್ನಲ್ಲಿಂದು ಮಾಧ್ಯಮಗೋಷ್ಟಿ ನಡೆಸಿದ ಕುರುಬರ ಸಂಘ ಸಿದ್ದರಾಮಯ್ಯರಿಗೆ ಸಿಎಂ ಪಟ್ಟ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಅನ್ನು ಆಗ್ರಹಿಸಿತು. ಈ ವೇಳೆ ಮಾತನಾಡಿದ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಮೂರ್ತಿ, ರಾಜ್ಯದ ಸಿಎಂ ಹುದ್ದೆಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಸ್ಪರ್ಧೆ ಇದೆ. ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸಿಎಂ ಹುದ್ದೆ ಕೊಡಬೇಕು. ಕುರುಬ ಸಮುದಾಯದ 90% ಜನರು ಕಾಂಗ್ರೆಸ್ಗೆ ಮತ ಹಾಕಿದ್ದಾರೆ. ಇದು ಸಿದ್ದರಾಮಯ್ಯರಿಗೆ ಕಡೆಯ ಚುನಾವಣೆ ಆಗಿದೆ. ಅವರಿಗೆ 13 ಬಾರಿ ಬಜೆಟ್ ಮಂಡಿಸಿದ ಅನುಭವ ಇದೆ. ಸಿದ್ದರಾಮಯ್ಯರನ್ನು ಸಿಎಂ ಆಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಕುರುಬರು 90% ಕಾಂಗ್ರೆಸ್, ಸಿದ್ದರಾಮಯ್ಯರನ್ನು ಬೆಂಬಲಿಸಿದ್ದಾರೆ. ಕಾಂಗ್ರೆಸ್ಗೆ ಹೆಚ್ಚು ಸ್ಥಾನ ಬರಲು ಕುರುಬರು ಕಾರಣರಾಗಿದ್ದಾರೆ. ಸಿದ್ದರಾಮಯ್ಯರು ಸಿಎಂ ಆಗ್ತಾರೆ. ಹಾಗಾಗಿ ಕಾಂಗ್ರೆಸ್ಗೆ ಟಿಕೆಟ್ ನೀಡುವಂತೆ ಸಮುದಾಯದವರ ಬಳಿ ಮತಯಾಚನೆ ಮಾಡಿದ್ದೆವು. ಹೀಗಾಗಿ ಕಾಂಗ್ರೆಸ್ಗೆ 135 ಸ್ಥಾನ ಬಂದಿದೆ. ಸಿದ್ದರಾಮಯ್ಯರನ್ನು ಸಿಎಂ ಮಾಡಲೇಬೇಕು ಎಂದು ಒತ್ತಾಯಿಸಿದರು.
ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದರು. ಈಗ ಕೊಟ್ಟಿರುವ ಭರವಸೆಗಳನ್ನು ಈಡೇರಿಸಬೇಕಾದರೆ ಸಿದ್ದರಾಮಯ್ಯ ಅವರು ಸಿಎಂ ಆಗಬೇಕು. 13 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಹಾಗಾಗಿ ಅವರು ಆರ್ಥಿಕ ತಜ್ಞರಾಗಿದ್ದಾರೆ. ಗ್ಯಾರಂಟಿಗಳನ್ನು ಅವರು ಬಂದರೆ ಈಡೇರಿಸುತ್ತಾರೆ ಎಂದು ಕುರುಬ ನಾಯಕರು ಆಗ್ರಹಿಸಿದರು.