ಬೆಂಗಳೂರು: ಕೋವಿಡ್-19 ಕರ್ತವ್ಯದಲ್ಲಿ ನಿರತವಾಗಿದ್ದ ಕೆಎಎಸ್ ಅಧಿಕಾರಿ ಎಚ್. ಗಂಗಾಧರಯ್ಯ ಅವರು ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕೋವಿಡ್ ಕರ್ತವ್ಯ ನಿರತ ಕೆಎಎಸ್ ಅಧಿಕಾರಿ ಸಾವು: ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ. ನೆರವು
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ ಕೋವಿಡ್ 19 ಕರ್ತವ್ಯದಲ್ಲಿದ್ದ ಎಚ್ ಗಂಗಾಧರಯ್ಯ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ನೀಡುವ ಭರವಸೆಯನ್ನು ಸಿಎಂ ಬಿಎಸ್ವೈ ನೀಡಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರ
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ನೋಡೆಲ್ ಅಧಿಕಾರಿಯಾಗಿ ಕೋವಿಡ್ 19 ಕರ್ತವ್ಯದಲ್ಲಿದ್ದ ಎಚ್ ಗಂಗಾಧರಯ್ಯ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕರ್ತವ್ಯದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಸೇರಿದಂತೆ ಪೋಲೀಸ್ ಗೌರವದೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ವೈ ತಿಳಿಸಿದ್ದಾರೆ.