ಕರ್ನಾಟಕ

karnataka

ETV Bharat / state

ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ 22 ಮಂದಿ ಸ್ಪರ್ಧೆ: ಮೇ 9ರಂದು ಚುನಾವಣೆ - kannada sahithya parishad election

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಮೇ 9ರಂದು ಚುನಾವಣೆ ನಡೆಯಲಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಲ್ಲಿಕೆಯಾಗಿರುವ ಎಲ್ಲ 22 ಅಭ್ಯರ್ಥಿಗಳ ನಾಮಪತ್ರವೂ ಕ್ರಮಬದ್ಧವಾಗಿದ್ದು, ಚುನಾವಣಾಧಿಕಾರಿ ಅಗೀಕರಿಸಿದ್ದಾರೆ.

kasapa-election-to-be-held-on-may-9
kasapa-election-to-be-held-on-may-9

By

Published : Apr 9, 2021, 5:34 PM IST

ಬೆಂಗಳೂರು:ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಟ್ಟು 22 ಮಂದಿ ಸ್ಪರ್ಧಿಸಿದ್ದು, ನಾಮಪತ್ರ ಸಲ್ಲಿಕೆಯಾಗಿದ್ದು, ಎಲ್ಲರ ನಾಮಪತ್ರವೂ ಸ್ವೀಕೃತಗೊಂಡಿವೆ ಎಂದು ಕಸಾಪ ತಿಳಿಸಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಮೇ 9ರಂದು ಚುನಾವಣೆ ನಡೆಯಲಿದೆ. ಎಪ್ರಿಲ್ 7ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಚುನಾವಣಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅವರ ನೇತೃತ್ವದಲ್ಲಿ ನಾಮಪತ್ರಗಳ ಪರಿಶೀಲನೆ ಗುರುವಾರ ನಡೆದಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಲ್ಲಿಕೆಯಾಗಿರುವ ಎಲ್ಲ 22 ಅಭ್ಯರ್ಥಿಗಳ ನಾಮಪತ್ರವೂ ಕ್ರಮಬದ್ಧವಾಗಿವೆ ಎಂದು ಚುನಾವಣಾಧಿಕಾರಿ ಅಗೀಕರಿಸಿದ್ದಾರೆ.

ವ.ಚ. ಚನ್ನೇಗೌಡ, ಮಹೇಶ್ ಜೋಶಿ, ಸಂಗಮೇಶ ಬಾದವಾಡಗಿ, ಸಿ.ಕೆ. ರಾಮೇಗೌಡ, ರಾಜಶೇಖರ ಮುಲಾಲಿ, ಬಸವರಾಜ ಶಿ. ಹಳ್ಳೂರ, ಬಾಡದ ಬದ್ರಿನಾಥ್, ಶಿವರಾಜ ಪಾಟೀಲ, ಮ.ಚಿ. ಕೃಷ್ಣ, ಸರಸ್ವತಿ ಶಿವಪ್ಪ ಚಿಮ್ಮಲಗಿ, ವೈ. ರೇಣುಕಾ, ಶೇಖರಗೌಡ ಮಾಲಿ ಪಾಟೀಲ, ಕೆ. ರತ್ನಾಕರ ಶೆಟ್ಟಿ, ವಾಲ್ಮೀಕಿ ಉರ್ಫ್, ಮಾಯಣ್ಣ, ಪ್ರಮೋದ್ ಹಳಕಟ್ಟಿ, ಶಿವಪ್ಪ ಮಲ್ಲಪ್ಪ ಬಾಗಲ, ಕೆ. ರವಿ ಅಂಬೇಕರ, ಕೆ.ಎಂ. ರೇವಣ್ಣ, ನ.ಶ್ರೀ. ಸುಧೀಂದ್ರರಾವ್, ಶರಣಬಸಪ್ಪ ಕಲ್ಲಪ್ಪ ದಾನಕೈ ಹಾಗೂ ಶಿವರುದ್ರಸ್ವಾಮಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಮೇ 9 ರಂದು ಚುನಾವಣೆ ನಡೆಯಲಿದೆ.

ABOUT THE AUTHOR

...view details