ಬೆಂಗಳೂರು: ಕನ್ನಡ ಶಾಲೆಗಳನ್ನು ಉಳಿಸಿ ಕನ್ನಡ ಭಾಷೆಯನ್ನು ಬೆಳೆಸಬೇಕು ಎನ್ನುವ ಮೂಲ ಧ್ಯೇಯ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು, ಯಾವುದೋ ಸಬೂಬು ಹೇಳಿ ಕನ್ನಡ ಶಾಲೆಗಳನ್ನು ಮುಚ್ಚುವುದನ್ನು ಸಹಿಸುವುದಿಲ್ಲ. ಸರಕಾರ ಕನ್ನಡ ಶಾಲೆಗಳ ಬಗ್ಗೆ ಅಸಡ್ಡೆ ತೋರುವುದು ಆಗಾಗ ಕಂಡು ಬರುತ್ತಿದ್ದು ಈ ಕ್ರಮವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿಕ್ಕಪೇಟೆ ಸರಕಾರಿ ಕನ್ನಡ ಶಾಲೆಯ ಜಾಗ ಮಾರಾಟ ಕ್ರಮ ಅಕ್ಷಮ್ಯ: ಮಹೇಶ ಜೋಶಿ
ಚಿಕ್ಕಪೇಟೆ ಒಟಿಸಿ ರಸ್ತೆಯಲ್ಲಿ ಇರುವ ಪುರಾತನ ಸರಕಾರಿ ಕನ್ನಡ ಶಾಲೆಯ ಜಾಗ ಮಾರಾಟಕ್ಕೆ ಇಟ್ಟಿರುವುದನ್ನು ಕನ್ನಡ ಸಾಹಿತ್ಯ ಪರಿಷತ್ತು ಸಹಿಸುವುದಿಲ್ಲ ಎಂದು ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ತಿಳಿಸಿದರು.
ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಹೇಶ್ ಜೋಶಿ, ಬೆಂಗಳೂರಿನ ಚಿಕ್ಕಪೇಟೆ ಒಟಿಸಿ ರಸ್ತೆಯಲ್ಲಿ ಇರುವ 1945ರಲ್ಲಿ ಆರಂಭವಾದ ಸರಕಾರಿ ಪ್ರೌಢಶಾಲೆಯನ್ನು ಶಿಕ್ಷಣ ಇಲಾಖೆಯ ತಕರಾರಿನ ನಡುವೆಯೂ ಜಿಲ್ಲಾಡಳಿತ ಮುಚ್ಚಲು ಹೊರಟಿರುವುದು ಅಕ್ಷಮ್ಯ. ಸ್ವತಂತ್ರ್ಯ ಪೂರ್ವದ ಶಾಲೆಯನ್ನು ಕಟ್ಟಡದ ಸಮೇತ ಮಾರಾಟ ಮಾಡಿ ಬೇರೆಯವರಿಗೆ ಪರಭಾರೆ ಮಾಡಿದ್ದನ್ನು ಯಾವೊಬ್ಬ ಕನ್ನಡಿಗನೂ ಸಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
ಇದನ್ನೂ ಓದಿ:ಸಾರ್ವಜನಿಕ ಗಣೇಶೋತ್ಸವದಲ್ಲಿ ಸಾವರ್ಕರ್ ಉತ್ಸವ ಆಚರಣೆ: ಪ್ರಮೋದ್ ಮುತಾಲಿಕ್