ಕರ್ನಾಟಕ

karnataka

ETV Bharat / state

ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸಿದ ಕಾಶಿ ಯಾತ್ರಾ ರೈಲು: ಪ್ರಧಾನಿ ಮೋದಿ - ಅಯೋಧ್ಯಾ ಹಾಗೂ ಪ್ರಯಾಗ್ ರಾಜ್

ಭಾರತ್ ಗೌರವ್ ಕಾಶಿ ಯಾತ್ರೆ ರೈಲಿಗೆ ಹಸಿರು ನಿಶಾನೆ ತೋರಿಸಿದ ಪ್ರಧಾನಿ ಮೋದಿ ಈ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸಿದ ಕಾಶಿ ಯಾತ್ರಾ ರೈಲು: ಪ್ರಧಾನಿ ಮೋದಿ
modi tweet on Bharat Gaurav Kashi Yatra train

By

Published : Nov 11, 2022, 12:59 PM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದು ಬೆಳಗ್ಗೆ ಭಾರತ್ ಗೌರವ್ ಕಾಶಿ ಯಾತ್ರಾ ರೈಲಿಗೆ ಚಾಲನೆ ನೀಡಿದ್ದಾರೆ. ಈ ಕುರಿತು ಕನ್ನಡದಲ್ಲೇ ಟ್ವೀಟ್‌ ಮಾಡಿರುವ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

"ಭಾರತ್ ಗೌರವ್ ಕಾಶಿ ಯಾತ್ರಾ ರೈಲು ಸಂಚಾರ ಸೌಲಭ್ಯವನ್ನು ಪಡೆದ ಮೊದಲ ರಾಜ್ಯವಾದ ಕರ್ನಾಟಕಕ್ಕೆ ಅಭಿನಂದನೆಗಳು. ಈ ರೈಲು ಕಾಶಿಯನ್ನು ಕರ್ನಾಟಕಕ್ಕೆ ಹತ್ತಿರವಾಗಿಸುತ್ತದೆ. ಯಾತ್ರಿಗಳು ಮತ್ತು ಪ್ರವಾಸಿಗರು ಕಾಶಿ, ಅಯೋಧ್ಯಾ ಹಾಗೂ ಪ್ರಯಾಗ್ ರಾಜ್‌ಗೆ ಭೇಟಿ ನೀಡುವುದು ಸುಲಭವಾಗುತ್ತದೆ." ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಮತ್ತು ಬೆಂಗಳೂರಿನಿಂದ ಕಾಶಿಗೆ ತೆರಳುವ ಭಾರತ್ ಗೌರವ್ ಕಾಶಿ ದರ್ಶನ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉಪಸ್ಥಿತರಿದ್ದರು.

ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರ ಬೃಹತ್ ಕಂಚಿನ ಪ್ರಗತಿ ಪ್ರತಿಮೆ ಲೋಕಾರ್ಪಣೆ ಮಾಡಿದ ಪ್ರಧಾನಿ

ABOUT THE AUTHOR

...view details