ಕರ್ನಾಟಕ

karnataka

ETV Bharat / state

ಹುಬ್ಬಳ್ಳಿಯಲ್ಲಿ ಕಾಶ್ಮೀರಿ ಯುವಕರ ಮೇಲೆ ಹಲ್ಲೆ ಪ್ರಕರಣ: ತನಿಖೆಗೆ ಹೈಕೋರ್ಟ್​​ ಸೂಚನೆ - ಹುಬ್ಬಳ್ಳಿಯಲ್ಲಿ ಕಾಶ್ಮೀರಿ ಯುವಕರ ಮೇಲೆ ಹಲ್ಲೆ ಪ್ರಕರಣ

ಹುಬ್ಬಳ್ಳಿ ನ್ಯಾಯಾಲಯದ ಎದುರು ನಡೆದ ಗಲಾಟೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್​ ಸೂಚನೆ ನೀಡಿದೆ.

High Court notice to Hubli Police Commissioner
ಹುಬ್ಬಳ್ಳಿ ಪೊಲೀಸ್ ಆಯುಕ್ತರಿಗೆ ಹೈಕೋರ್ಟ್​ ಸೂಚನೆ

By

Published : Mar 17, 2020, 9:00 PM IST

ಬೆಂಗಳೂರು: ಹುಬ್ಬಳ್ಳಿಯಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ಪಾಕಿಸ್ತಾನದ ಪರ ಘೋಷಣೆ ಕೂಗಿದ ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಅವರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಹುಬ್ಬಳ್ಳಿ ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಹೈಕೋರ್ಟ್ ಸೂಚಿಸಿದೆ.


ಪಾಕ್ ಪರ ಘೋಷಣೆ ಕೂಗಿದ ವಿದ್ಯಾರ್ಥಿಗಳ ಪರ ಯಾವ ವಕೀಲರು ಕೂಡಾ ವಕಾಲತ್ತು ಹಾಕದಂತೆ ಹುಬ್ಬಳ್ಳಿ ವಕೀಲರ ಸಂಘ ಕೈಗೊಂಡಿದ್ದ ನಿರ್ಣಯ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಹುಬ್ಬಳ್ಳಿ ವಕೀಲರ ಸಂಘವು ವಿದ್ಯಾರ್ಥಿಗಳ ಪರ ವಕಾಲತ್ತು ಹಾಕದಂತೆ ನಿರ್ಬಂಧಿಸಿದ್ದ ತನ್ನ ನಿರ್ಣಯವನ್ನು ಹಿಂಪಡೆದಿರುವ ಕುರಿತು ಪ್ರಮಾಣ ಪತ್ರ ಸಲ್ಲಿಸಿದರು. ಪ್ರಮಾಣ ಪತ್ರ ದಾಖಲಿಸಿಕೊಂಡ ಪೀಠ, ಇನ್ನು ಅರ್ಜಿಯ ಹೆಚ್ಚಿನ ವಿಚಾರಣೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟು ಇತ್ಯರ್ಥಪಡಿಸಿತು.

ಇದೇ ವೇಳೆ ಹುಬ್ಬಳ್ಳಿ ಪೊಲೀಸರಿಗೆ ನಿರ್ದೇಶನ ನೀಡಿದ ಪೀಠ, ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ನೀಡಿರುವ ಭದ್ರತೆಯನ್ನು ಕೋರಿಕೆ ಮೇರೆಗೆ ಮುಂದುವರೆಸಬೇಕು. ಅದೇ ರೀತಿ ಆರೋಪಿಗಳನ್ನು ಹುಬ್ಬಳ್ಳಿ ನ್ಯಾಯಾಲಯದ ಎದುರು ಹಾಜರುಪಡಿಸಿದ ಸಂದರ್ಭದಲ್ಲಿ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಿತು.

ABOUT THE AUTHOR

...view details