ಬೆಂಗಳೂರು: ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ' ಟ್ರಸ್ಟ್ ರಚನೆಗೆ ಕಾರಣರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧನ್ಯವಾದ ಸಲ್ಲಿಸಿದ್ದಾರೆ.
ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ರಚನೆ: ಪಿಎಂಗೆ ಅಭಿನಂದನೆ ಸಲ್ಲಿಸಿದ ಕಟೀಲ್ - ಪಿಎಂಗೆ ಅಭಿನಂದನೆ ಸಲ್ಲಿಸಿದ ಕಟೀಲ್
ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ' ಟ್ರಸ್ಟ್ ರಚನೆಗೆ ಕಾರಣರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧನ್ಯವಾದ ಸಲ್ಲಿಸಿದ್ದಾರೆ.
![ರಾಮಮಂದಿರ ನಿರ್ಮಾಣಕ್ಕೆ ಟ್ರಸ್ಟ್ ರಚನೆ: ಪಿಎಂಗೆ ಅಭಿನಂದನೆ ಸಲ್ಲಿಸಿದ ಕಟೀಲ್ kateel-congratulates-pm-for-building-ram-mandir-trust](https://etvbharatimages.akamaized.net/etvbharat/prod-images/768-512-5968699-thumbnail-3x2-sanju.jpg)
ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕಾಗಿ 'ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ' ಟ್ರಸ್ಟ್ ರಚಿಸಲು ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದೆ. ಲೋಕಸಭೆಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸಚಿವ ಸಂಪುಟದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಟ್ರಸ್ಟ್ ರಚನೆಗೆ ಒಪ್ಪಿಗೆ ನೀಡಿದ ಕೇಂದ್ರ ಸರ್ಕಾರ ಮತ್ತು ಇದಕ್ಕೆ ಕಾರಣರಾದ ಪ್ರಧಾನಿ ನರೇಂದ್ರಮೋದಿ ಅವರಿಗೆ ರಾಜ್ಯ ಬಿಜೆಪಿ ಪರವಾಗಿ ಧನ್ಯವಾದಗಳು ಎಂದಿದ್ದಾರೆ.
ಟ್ರಸ್ಟ್ ರಚನೆಯ ಐತಿಹಾಸಿಕ ನಿರ್ಧಾರದ ಮೂಲಕ ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣದ ಕಾರ್ಯ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಈ ನಿರ್ಧಾರ ಮೂಲಕ ನರೇಂದ್ರ ಮೋದಿ ಅವರು ಕೋಟ್ಯಾಂತರ ಜನರ ಭಾವನೆಗಳನ್ನು ಗೌರವಿಸಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನೋಡುವ ಕೋಟ್ಯಂತರ ಭಾರತೀಯರು ಮುಖ್ಯವಾಗಿ ಹಿಂದೂಗಳ ಕನಸು ಈಡೇರುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿ ಅವರಿಗೆ ಅನಂತ ವಂದನೆಗಳು ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.