ಬೆಂಗಳೂರು: ಧರ್ಮೇಗೌಡರ ನಿಧನದಿಂದ ತೆರವಾದ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ತುಳಸಿ ಮುನಿರಾಜುಗೌಡಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿ ಫಾರಂ ವಿತರಿಸಿದರು.
ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡಗೆ ಬಿ ಫಾರಂ ನೀಡಿದ ಕಟೀಲ್ - Katil distributed B Form to BJP candidate Tulsi Muniraju Gowda
ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬಿಜೆಪಿಯಿಂದ ತುಳಸಿ ಮುನಿರಾಜುಗೌಡಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿ ಫಾರಂ ವಿತರಿಸಿದರು.
ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜು ಗೌಡಗೆ ಬಿ ಫಾರಂ ವಿತರಿಸಿದ ಕಟೀಲ್
ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಭೇಟಿ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿ ಪರಿಷತ್ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಿದರು.
ನಂತರ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲು ರಾಜ್ಯಾಧ್ಯಕ್ಷರಿಂದ ಬಿ ಫಾರಂ ಪಡೆದುಕೊಂಡರು. ಮಾರ್ಚ್ 15 ರಂದು ವಿಧಾನ ಪರಿಷತ್ಗೆ ನಡೆಯಲಿರುವ ಉಪಚುನಾವಣೆಗೆ ತುಳಸಿ ಮುನಿರಾಜುಗೌಡ ನಾಳೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.