ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅಂತಿಮ ದರ್ಶನಕ್ಕಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಫರ್ನಾಂಡಿಸ್ ಅಂತ್ಯಕ್ರಿಯೆ: ಬೆಂಗಳೂರಿಗೆ ಆಗಮಿಸಿದ ಕೆ.ಸಿ.ವೇಣುಗೋಪಾಲ್ - ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದು, ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.
ಕೆ.ಸಿ.ವೇಣುಗೋಪಾಲ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವೇಣುಗೋಪಾಲ್ ಅವರನ್ನು ಕೆಪಿಸಿಸಿ ಕಾರ್ಯದರ್ಶಿ ಈಶ್ವರ್ಖಂಡ್ರೆ ಬರಮಾಡಿಕೊಂಡರು. ಕಳೆದ ನಾಲ್ಕು ದಿನಗಳ ಹಿಂದೆ ಅನಾರೋಗ್ಯದಿಂದ ಮೃತಪಟ್ಟಿರುವ ಆಸ್ಕರ್ ಫರ್ನಾಂಡಿಸ್ ಅಂತ್ಯಕ್ರಿಯೆ ಇಂದು ನಡೆಯಲಿದ್ದು, ಕೆ.ಸಿ.ವೇಣುಗೋಪಾಲ್ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ.