ಬೆಂಗಳೂರು: ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ. ಯುವ ಶಕ್ತಿ ದೇಶದಲ್ಲಿದೆ. ದೇಶದಲ್ಲಿ ಹಲವು ಸಂಪನ್ಮೂಲಗಳಿವೆ. ಇವತ್ತಿಗೂ ಹಲವು ಸಮಸ್ಯೆಗಳ ಬಗ್ಗೆ ಚರ್ಚೆಯಾಗಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಾಗ್ದಾಳಿ ನಡೆಸಿದರು.
ದೇವೇಗೌಡರ ಜೊತೆ ಸುದೀರ್ಘ ಚರ್ಚೆ ನಡೆಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಜ್ವಲ ಹಿಂದೂಸ್ತಾನ್ ನಮಗೆ ಬೇಕಿದೆ. ಜನರು ಈ ನಿಟ್ಟಿನಲ್ಲಿ ಗಮನಹರಿಸಬೇಕಿದೆ. ದೇಶದಲ್ಲಿ ರೈತರು, ದಲಿತರು, ಆದಿವಾಸಿಗಳು ಕಷ್ಟದಲ್ಲಿ ಇದ್ದಾರೆ. ಭರವಸೆಗಳನ್ನ ಸಾಕಷ್ಟು ಕೊಡಬಹುದು. ಆದರೆ, ಯಾವ ಕ್ರಮ ತೆಗೆದುಕೊಳ್ಳಲಾಗಿದೆ?. ಯುವಕರಿಗೆ ಉದ್ಯೋಗ ಕೊಟ್ರಾ?. ದೇಶದಲ್ಲಿ ಎಲ್ಲವೂ ಸಮಸ್ಯೆಗಳೇ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.