ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ 2022-23ನೇ ಶೈಕ್ಷಣಿಕ ಸಾಲಿನ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತಿಳಿಸಿದೆ.
ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://kea.nic.in ವೀಕ್ಷಿಸಬಹುದಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಇಂದಿನಿಂದ ಫೆ.22ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸೆಲಿಂಗ್ ಅನ್ನು ಪ್ರಾಧಿಕಾರ ನಡೆಸಲಿದೆ ಎಂದು ಹೇಳಿದೆ. ಮಾ.20ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆಯವರೆಗೆ 100 ಅಂಕಗಳಿಗೆ ಪ್ರವೇಶ ಪರೀಕ್ಷೆ ನಡೆಯಲಿದ್ದು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://kea.nic.in ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ:ಕರ್ನಾಟಕದಲ್ಲೇ ಮೊದಲ ಬಾರಿಗೆ 'ಇಂಟ್ರಾ ಆಪರೇಟಿವ್ ರೇಡಿಯೋ ಥೆರಪಿ': ಕೇವಲ 30 ನಿಮಿಷದಲ್ಲಿ ಚಿಕಿತ್ಸೆ