ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಸಲುವಾಗಿ ನಡೆಸುವ ಅರ್ಹತಾ ಪರೀಕ್ಷೆ ಡಿಸೆಂಬರ್ 31ರ ಬದಲಿಗೆ ಜನವರಿ 13ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್ ರಮ್ಯಾ ತಿಳಿಸಿದ್ದಾರೆ.
ಈಟಿವಿ ಭಾರತದೊಂದಿಗೆ ಮಾತನಾಡಿದ ಅವರು, ಕೆಸೆಟ್-2023ರ ಅರ್ಹತಾ ಪರೀಕ್ಷೆಗೆ ಆನ್‌ಲೈನ್ ನೋಂದಣಿ ಮಾಡುವ ವೇಳೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವಾಗಿ ಕಲಬುರಗಿ ಎಂದು ಆಯ್ಕೆ ಮಾಡಿದ್ದವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಬೇಕು. ವಿಜಯಪುರ ಎಂದು ಆಯ್ಕೆ ಮಾಡಿದ್ದವರು ತುಮಕೂರು ನಗರದಲ್ಲಿ ಪರೀಕ್ಷೆ ಬರೆಯಬೇಕು.